ನರಸಿಂಹರಾಜಪುರ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಸೋಮವಾರದಿಂದ ಶಾಲಾ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್ ಹೇಳಿದರು.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ ವ್ಯಾಪ್ತಿಯಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ 110 ಶಾಲೆಗಳಿವೆ. 9,500 ಸಾವಿರ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ ಎಂದರು.

ಎಲ್ಲಾ ಶಾಲೆಗಳಲ್ಲೂ ಆರಂಭೋತ್ಸವಕ್ಕೆ ಮೇ 29 ಮತ್ತು 30ರಂದು ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೂನ್ 1ರಂದು ಮೇಘಾ ಪಿಟಿಎಂ ಸಹಯೋಗದೊಂದಿಗೆ ಅದ್ಧೂರಿ ಶಾಲಾ ಪ್ರಾರಂಭೋತ್ಸವ ನಡೆಯಲಿದೆ. ಶಾಲೆಗಳನ್ನೂ ಹಸಿರು ತೋರಣದಿಂದ ಶೃಂಗರಿಸಲಾಗುವುದು. ಮಕ್ಕಳೊಂದಿಗೆ ಪೋಷಕರನ್ನು ಆಹ್ವಾನಿಸಲಾಗಿದೆ. ಶಾಲೆಗೆ ಬರುವ ಮಕ್ಕಳಿಗೆ ಶಾಲಾಭಿವೃದ್ಧಿ ಸಮಿತಿಯವರು, ಪೋಷಕರು, ಶಿಕ್ಷಕರು ಹೂ ನೀಡುವ ಮೂಲಕ ಬರಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಪೋಷಕರಿಗೆ ವಿವಿಧ ಚಟುವಟಿಕೆ ನಡೆಸಲಾಗುವುದು. ಶಾಲಾಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಪೋಷಕರನ್ನು ಕೂರಿಸಿಕೊಂಡು ಸಭೆ ನಡೆಸಿ ಶಾಲೆಯ ಅಭಿವೃದ್ಧಿ, ದಾಖಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಗುವುದು. ಶಾಲೆಯ ದುರಸ್ತಿ ಅವಶ್ಯವಿದ್ದಲ್ಲಿ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು, ಗ್ರಾಮ ಪಂಚಾಯಿತಿ ಅಥವಾ ದಾನಿಗಳ ನೆರವನ್ನು ಪಡೆಯಲಾಗುವುದು. ಶಾಲೆಯ ಅಭಿವೃದ್ಧಿಗೆ ದಾನ ನೀಡಿದ ಪ್ರತಿಯೊಬ್ಬರನ್ನು ಸನ್ಮಾನಿಸಲಾಗುವುದು. ಶಾಲೆಯ ಆರಂಭದ ದಿನ ಮಕ್ಕಳಿಗೆ ಸಿಹಿ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಈಗಾಗಲೇ ಎಲ್ಲಾ ಸರ್ಕಾರಿ ಶಾಲೆಗಳಿಗೂ ಪಠ್ಯಪುಸ್ತಕ ಪೂರೈಸಲಾಗಿದ್ದು, ಶಾಲೆಯ ಆರಂಭದ ದಿನವೇ ವಿತರಿಸಲಾಗುವುದು. ಸಮವಸ್ತ್ರವನ್ನು ಶಾಲೆ ಆರಂಭದ ಒಂದೆರಡು ದಿನಗಳಲ್ಲಿ ವಿತರಿಸಲಾಗುವುದು. ಉಚಿತ ಶೂಗಳನ್ನು ಕೊಡಲು ಸರ್ಕಾರದ ಹಂತದಲ್ಲಿ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಒಂದು ತಿಂಗಳೊಳಗೆ ಸಮರ್ಪಕವಾಗಿ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ಪಿಎಂಶ್ರೀ ಶಾಲೆಗಳಲ್ಲಿ ಆಡಂಬರಿಕವಾಗಿ ಶಾಲಾ ಪ್ರಾರಂಭೋತ್ಸವ ಮಾಡಲಾಗುವುದು. ಶಾಲೆ ಆರಂಭವಾದ 10 ದಿನಗಳ ಕಾಲ ಮಿಂಚಿನ ಸಂಚಾರ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಡಿ ಪ್ರತಿದಿನ 4 ಶಾಲೆಗಳಿಗೆ ತಾಲ್ಲೂಕು ಮಟ್ಟದ ಶಿಕ್ಷಣ ಇಲಾಖೆಯ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಶಾಲೆಯ ಸಕಲ ಸೌಲಭ್ಯಗಳು, ಸ್ವಚ್ಛತೆ, ಪುಸ್ತಕಗಳ ವಿತರಣೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು.

ಕಳೆದ ಶೈಕ್ಷಣಿಕ ಸಾಲಿನಂತೆ ಮಳೆ ಅಧಿಕವಾದರೆ ಏಕಾಏಕಿ ರಜೆ ನೀಡುವುದಿಲ್ಲ. ತಾಲ್ಲೂಕಿನಲ್ಲಿ ಎಲ್ಲಿ ಅವಶ್ಯಕತೆಯಿದೆಯೋ ಅಲ್ಲಿ ಮಾತ್ರ ರಜೆ ನೀಡಲಾಗುವುದು. ಶಿಥಿಲಗೊಂಡ ಕಟ್ಟಡಗಳಲ್ಲಿ ಮಕ್ಕಳನ್ನು ಕೂರಿಸಬಾರದು ಎಂಬ ನಿರ್ದೇಶನದಂತೆ ಒಂದೆರೆಡು ದಿನಗಳಲ್ಲಿ ಎಲ್ಲಾ ಶಾಲೆಗಳ ಕಟ್ಟಡಗಳ ಸುರಕ್ಷತಾ ಪ್ರಮಾಣ ಪಡೆಯಲಾಗುತ್ತದೆ. ಶಿಕ್ಷಕರಿಗೆ ಕಾಮ್ಸ್ (ಕೆಎಎಎಂಎಸ್) ಹಾಜರಾತಿ ಕಡ್ಡಾಯವಾಗಿದೆ ಎಂದು ಅವರು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-126-649102808

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.