ನರಸಿಂಹರಾಜಪುರ: ‘ಚುನಾವಣೆ ಸಂದರ್ಭದಲ್ಲಿ ಶಿಕ್ಷಕರ ಸಂಘದವರು ಬೇರೆ, ಬೇರೆ ತಂಡವಾಗಿ ಸ್ಪರ್ಧಿಸಿದ್ದರೂ, ಆಯ್ಕೆಯಾದ ಪದಾಧಿಕಾರಿಗಳು ಎಲ್ಲಾ ಶಿಕ್ಷಕರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿ ಕಾರಿ ಶಬನಾ ಅಂಜುಮ್ ಹೇಳಿದರು.

ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಶುಕ್ರವಾರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ 2026–2031ರ ಅವಧಿಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.

ಶಿಕ್ಷಕರ ಚುನಾವಣೆ ಪಾರದರ್ಶಕ ವಾಗಿ ನಡೆಸಿದ್ದು, ಮೊದಲ ಬಾರಿಗೆ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ನಾನು ಮತ ಎಣಿಕೆ ಸಂದರ್ಭದಲ್ಲಿ ಅಭ್ಯರ್ಥಿಯ ಏಜೆಂಟರ ಜತೆಗೆ ಇತರ ಮತದಾರರು ಭಾಗವಹಿಸಲು ಅವಕಾಶ ನೀಡಿ ಯಶಸ್ವಿಯಾಗಿ ಚುನಾವಣೆ ನಡೆಸಲಾಗಿತ್ತು. ನಂಜುಂಡಪ್ಪ, ಹೇಮರಾಜ್, ಸುಭಾಷ್, ಮಹಿಳಾ ಕ್ಷೇತ್ರದಿಂದ ಶಿಲ್ಪಕುಮಾರಿ ಆಯ್ಕೆಯಾಗಿದ್ದು ಬಹುಮತ ಪಡೆದ ತಂಡದವರು ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ಶಿಕ್ಷಕರ ಸಂಘ ಮತ್ತು ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳ ಉಳಿವಿಗಾಗಿ ಕಾರ್ಯನಿರ್ವಹಿಸಬೇಕು ಎಂದರು.

ಬಡ್ತಿ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್ ಮಾತನಾಡಿ, ಚುನಾವಣೆಯಲ್ಲಿ ತಾಲ್ಲೂಕಿನಲ್ಲಿ 50 ಶಿಕ್ಷಕರಿಗೆ 1 ಪದಾಧಿಕಾರಿಗಳಂತೆ 4 ಜನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಪದಾಧಿಕಾರಿಗಳು ಶಿಕ್ಷಕರ ಸಮಸ್ಯೆಗಳಿಗೆ ಮತ್ತು ಬೇಡಿಕೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಶಿಕ್ಷಕರಿಗೆ ಸಾಂಸ್ಕೃತಿಕ ಸ್ಪರ್ಧೆ, ಕ್ರೀಡಾಕೂಟಗಳು ಹಾಗೂ ಶಿಕ್ಷಕರ ಕುಟುಂಬ ಸಮ್ಮಿಲನ ಕಾರ್ಯಕ್ರಮ ಆಯೋಜಿಸಿ, ಸಮನ್ವಯ ಸಾಧಿಸುವ ಕೆಲಸ ಮಾಡಬೇಕು ಎಂದರು.

ಮೂರನೇ ಬಾರಿ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಬಿ. ನಂಜುಂಡಪ್ಪ ಮಾತನಾಡಿ, ಚುನಾವಣೆಗಳಲ್ಲಿ ಸೋಲು–ಗೆಲುವು ಮುಖ್ಯವಲ್ಲ. ಪಾರದರ್ಶಕವಾಗಿ ಚುನಾವಣೆ ನಡೆಸುವುದು ಮುಖ್ಯ. ಶಿಕ್ಷಕರ ಸಂಘದಲ್ಲೂ ಈಚೆಗಿನ ಚುನಾವಣೆಗಳಲ್ಲಿ ಹಣ, ಜಾತಿ ವ್ಯವಸ್ಥೆ ಬಂದಿದ್ದು ಚುನಾವಣೆ ಎದುರಿಸುವುದೇ ಕಷ್ಟವಾಗಿದೆ. ಕಳೆದ 2 ಅವಧಿಯಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷನಾಗಿ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಆಯ್ಕೆ ಮಾಡಿದ ಶಿಕ್ಷಕರಿಗೆ ಚಿರಋಣಿಯಾಗಿದ್ದೇನೆ ಎಂದರು.

ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸದ ಜಯರಾಮ್, ಇಸಿಒ ರಂಗಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜನಾಯ್ಕ, ಪದಾಧಿಕಾರಿಗಳು ಮಾತನಾಡಿದರು.

ಮಂಜುಳಾ, ಮಂಜಪ್ಪ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

ತಾಲ್ಲೂಕು ಪ್ರಾಥಮಿಕ ಸಂಘ ನೂತನ ಪದಾಧಿಕಾರಿಗಳ ಆಯ್ಕೆ: ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಬಿ. ನಂಜುಂಡಪ್ಪ, ಪ್ರಧಾನ ಕಾರ್ಯದರ್ಶಿ ಶಿಲ್ಪಕುಮಾರಿ, ಖಜಾಂಚಿ ಹೇಮರಾಜ್ ಆಯ್ಕೆಯಾದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-126-1857892584

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.