ನರಸಿಂಹರಾಜಪುರ: ಮಹಿಳೆಯರಿಗೆ ಅವರ ಸಬಲೀಕರಣದ ಜತೆಗೆ ಸುರಕ್ಷತೆಯ ಬಗ್ಗೆಯೂ ಅರಿವು ಮೂಡಿ ಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಹಿಳೆಯರು ಉದ್ಯೋಗದ ಬಗ್ಗೆ ಉತ್ತಮ ಕೌಶಲ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ 28 ಬಗೆಯ ಕೌಶಲ ತರಬೇತಿಯನ್ನು ನೀಡಲು ಅವಕಾಶವಿದೆ. ಶೃಂಗೇರಿ ಕ್ಷೇತ್ರದ ವ್ಯಾಪ್ತಿಯ 3 ತಾಲ್ಲೂಕುಗಳಲ್ಲೂ ಮಹಿಳೆಯರಿಗೆ ಕೌಶಲ ತರಬೇತಿ ನೀಡುವ ನಿಟ್ಟಿನಲ್ಲಿ ಸಂಘಟನೆ ಮಾಡಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮಹಿಳಾ ಆಯೋಗದ ಅಧ್ಯಕ್ಷರನ್ನು ಮಾತ್ರ ನೇಮಕ ಮಾಡಲಾಗಿದ್ದು, 6 ಜನ ಸದಸ್ಯರನ್ನು ಸರ್ಕಾರ ನೇಮಕ ಮಾಡಿಲ್ಲ. ಹಾಗಾಗಿ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಆಯ್ಕೆಯಾದ ನಂತರ ಜನರನ್ನು ಸುಲಭವಾಗಿ ತಲಪುವ ನಿಟ್ಟಿನಲ್ಲಿ ಡಿಜಿಟಲ್ ಮಾಧ್ಯಮವನ್ನು ವ್ಯಾಪಕವಾಗಿ ಬಳಸಿಕೊಳ್ಳಲಾಗುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಜಿಲ್ಲಾ ಮಟ್ಟದ ಅಧಿಕಾರಗಳೊಂದಿಗೆ ಸಭೆ ನಡೆಸಿ ಮಹಿಳೆಯರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ. ಸರ್ಕಾರದ ಯೋಜನೆ, ಕಾನೂನುಗಳ ಬಗ್ಗೆ ಅರಿವು ಮೂಡಿಸಲು ಉನ್ನತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಹೆಣ್ಣುಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಲಾ–ಕಾಲೇಜು, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಆಸ್ಪತ್ರೆಗಳು, ರೈಲ್ವೆ ನಿಲ್ದಾಣ ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳಾ ಸಹಾಯವಾಣಿ ಸಂಖ್ಯೆ ಅಳವಡಿಸುವಂತೆ ಸೂಚಿಸಲಾಗಿದೆ. ಶಾಲಾ, ಕಾಲೇಜುಗಳಲ್ಲಿ ಹೆಣ್ಣು ಮಕ್ಕಳ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಆಂತರಿಕ ದೂರು ಸಮಿತಿ ಸ್ಥಾಪಿಸುವುದು ಕಡ್ಡಾಯ ಮಾಡಲಾಗಿದೆ. ಖಾಸಗಿ ಶಾಲೆಗಳಲ್ಲೂ ಮಹಿಳಾ ಸಹಾಯವಾಣಿ 112 ಸಂಖ್ಯೆ ಅಳವಡಿಸುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅಕ್ರಮ ಮದ್ಯ ಮಾರಾಟ ತಡೆಗೆ ಸೂಚನೆ: ತಾಲ್ಲೂಕಿನ ಬನ್ನೂರು ಗ್ರಾಮದಲ್ಲಿ ಅಂಗಡಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಹಾಗೂ ಅದನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಮಹಿಳೆಯರು ದೂರು ನೀಡಿದೆ. ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-126-1607592689

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.