ನರೇಗಲ್: ‘ಹಿಂದುಳಿದ ಎಲ್ಲಾ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಸಂವಿಧಾನದ ಎಲ್ಲಾ ಕರ್ತವ್ಯ ಮತ್ತು ಕಾರ್ಯಗಳನ್ನು ಸರಿಯಾಗಿ ಓದಿ ಜೀವನವನ್ನು ಉಜ್ವಲಗೊಳಿಸಿಕೊಳ್ಳಬೇಕು’ ಎಂದು ರೋಣ ಸಿಪಿಐ ವಿಜಯಕುಮಾರ ಹೇಳಿದರು.

ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ತೋಟಗಂಟಿ ಗ್ರಾಮದಲ್ಲಿ ಈಚೆಗೆ ನಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದರು.

‘ಬಾಬಾಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನ ಓದಿ ಎಲ್ಲಾ ಮಕ್ಕಳು ತಮ್ಮ ಜೀವನ ಬದಲಾಯಿಸಿಕೊಳ್ಳಬೇಕು. ಸಮಾಜದಲ್ಲಿ ಅಹಿತಕರ ಘಟನೆಯಲ್ಲಿ ಯಾರೂ ಭಾಗಿಯಾಗಬಾರದು. ಏನಾದರೂ ಸಮಸ್ಯೆಗಳಿದ್ದರೆ ನಮ್ಮ ಪೊಲೀಸ್ ಇಲಾಖೆಗೆ ತಿಳಿಸಬೇಕು. ನಾವು ಅದನ್ನು ಪರಿಶೀಲಿಸಿ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ’ ಎಂದರು.

ನರೇಗಲ್ ಪೊಲೀಸ್ ಠಾಣೆಯ ಪಿಎಸ್ಐ ಐಶ್ವರ್ಯ ನಾಗರಾಳ ಮಾತನಾಡಿ, ‘ಸಮಾಜದಲ್ಲಿ ಯಾರೂ ಮೇಲಲ್ಲ, ಯಾರು ಕೇಳಲ್ಲ ಎಲ್ಲರೂ ಒಂದೇ. ಎಲ್ಲಾ ಮಕ್ಕಳಿಗೆ ಶಿಕ್ಷಣ ಒದಗಿಸಬೇಕು ಜೊತೆಗೆ ಸಂಸ್ಕಾರ ಕಲಿಸಬೇಕು ಅಂದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ’ ಎಂದು ಹೇಳಿದರು.

ಸಿಬ್ಬಂದಿಗಳಾದ ಎಸ್.ಬಿ.ವಡ್ಡಟ್ಟಿ, ಷರೀಫ್ ಮುಲ್ಲಾ, ಬಿ.ಎಸ್.ಮಾಯಣ್ಣವರ, ಸಮಾಜದ ಹಿರಿಯರಾದ ಶಿವಾನಂದ ಗೋಗೇರಿ, ಲಕ್ಷ್ಮಪ್ಪ ಹಳ್ಳದಮನಿ, ದೇವಪ್ಪ ನೂಲ್ಕಿ, ಯಲ್ಲಪ್ಪ ಹಳ್ಳದಮನಿ, ಫಕೀರಪ್ಪ ಪೂಜಾರ, ಶರಣಪ್ಪ ಹಳ್ಳದಮನಿ, ಶೇಖಪ್ಪ ಡಂಬಳ, ಕಳಕಪ್ಪ ಡಂಬಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-23-1480502222

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.