ನರೇಗಲ್: ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಪದವಿ ಪ್ರಥಮ ವರ್ಷದ ವಿವಿಧ ಕೋರ್ಸ್ಗಳಿಗೆ ಪ್ರವೇಶಗಳು ಆರಂಭಗೊಂಡಿವೆ ಎಂದು ಪ್ರಾಂಶುಪಾಲ ಎಸ್.ಎಲ್. ಗುಳೇದಗುಡ್ಡ ತಿಳಿಸಿದರು.

‘ಈ ವರ್ಷ ನಮ್ಮ ಸರ್ಕಾರಿ ಮಹಾವಿದ್ಯಾಲಯದಲ್ಲಿ ಅಂತಿಮ ವರ್ಷದ ಪದವಿ ಓದುತ್ತಿರುವ 80 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದ ಮೂಲಕ ವಿವಿಧ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ. ಅದರಲ್ಲೂ ಇಬ್ಬರು ಬಿಸಿಎ ವಿದ್ಯಾರ್ಥಿಗಳು ಎಂಜಿನಿಯರ್ ಹುದ್ದೆಗೆ ಆಯ್ಕೆಯಾಗಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತದೆ. ಆದ್ದರಿಂದ ಬಿ.ಎ, ಬಿ.ಕಾಂ, ಬಿ.ಸಿ.ಎ ಹಾಗೂ ಬಿ. ಎಸ್.ಸಿ ಕೋರ್ಸ್ಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ.

ಪ್ರವೇಶಕ್ಕಾಗಿ ಯುಯುಸಿಎಂಎಸ್ ವೆಬ್ ಸೈಟ್ ಮೂಲಕ ಅನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಅಗತ್ಯ ದಾಖಲೆಗಳೊಂದಿಗೆ ಕಾಲೇಜಿಗೆ ನೇರವಾಗಿ ಭೇಟಿಯಾಗುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬಿ.ಸಿ.ಎ ಕೋರ್ಸ್ ಎಐಸಿಟಿ ದೆಹಲಿಯಿಂದ ಮಾನ್ಯತೆ ಪಡೆದಿದೆ ಆದ್ದರಿಂದ ಗ್ರಾಮೀಣ ಭಾಗದ ಮಕ್ಕಳು ಸರ್ಕಾರಿ ಕಾಲೇಜಿನ ಕೋರ್ಸ್ಗಳ ಸದುಪಯೋಗ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ 9449188352 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-23-1678816024

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.