ನರೇಗಲ್: ಸರ್ಕಾರದ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಳ್ಳಲಾಗಿರುವ ಶಾಲಾ ದಾಖಲಾತಿ ಆಂದೋಲನದ ಅಂಗವಾಗಿ ಜಕ್ಕಲಿ ಗ್ರಾಮದ ಕೆ.ಜಿ.ಎಸ್ ಹಾಗೂ ಎಂ.ಸಿ.ಎಸ್ ಸರ್ಕಾರಿ ಶಾಲೆಗಳಲ್ಲಿ ಬುಧವಾರ ಜನಜಾಗೃತಿ ಕಾರ್ಯಕ್ರಮ ನಡೆಯಿತು.

ಈ ವೇಳೆ ಮಾತನಾಡಿದ ಮುಖ್ಯ ಶಿಕ್ಷಕ ಎಸ್.ಬಿ. ಗವಿ, 6ರಿಂದ 14 ವರ್ಷ ವಯಸ್ಸಿನೊಳಗಿನ ಪ್ರತಿಯೊಂದು ಮಗು ಕಡ್ಡಾಯವಾಗಿ ಶಾಲೆಗೆ ಸೇರಬೇಕು. ಶಿಕ್ಷಣದಿಂದ ಯಾವುದೇ ಮಗು ವಂಚಿತವಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಶಾಲಾ ದಾಖಲಾತಿ ಆಂದೋಲನ ಹಮ್ಮಿಕೊಂಡಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ ಉತ್ತಮ ಶಿಕ್ಷಣದ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಹಾಗೂ ಉಚಿತ ಶಿಕ್ಷಣದೊಂದಿಗೆ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್, ಪೌಷ್ಟಿಕ ಬಿಸಿಯೂಟ, ಕ್ಷೀರಭಾಗ್ಯ ಯೋಜನೆ, ಕಂಪ್ಯೂಟರ್ ಶಿಕ್ಷಣ, ಸುಸಜ್ಜಿತ ಗ್ರಂಥಾಲಯ ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಅನುಭವಿ ಶಿಕ್ಷಕರಿಂದ ನಲಿ-ಕಲಿ ಪದ್ಧತಿಯಲ್ಲಿ ಬೋಧನೆ ನಡೆಯುತ್ತಿದೆ ಎಂದರು.

ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಜೊತೆಗೆ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನೂ ನಿಯಮಿತವಾಗಿ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಕಾರ್ಯದಲ್ಲಿ ಸಾರ್ವಜನಿಕರು ಹಾಗೂ ಪೋಷಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಮುಖ್ಯ ಶಿಕ್ಷಕ ಎಚ್. ಎಸ್. ಬಿಂಗಿ, ಶಿಕ್ಷಕರಾದ ಎಂ. ವಿ. ತಾಳಿಕೋಟಿ, ಎಸ್. ಎ. ಪಲ್ಲೇದ, ಶಿಕ್ಷಕಿಯರಾದ ಎ. ಬಿ. ಜಕ್ಕಲಿ, ಎ. ಪಿ. ಶೆಟ್ಟರ, ಪಿ. ಜಿ. ಹುಯಿಲಗೋಳ, ಎಸ್. ಎಸ್. ಯಲ್ಲರಡ್ಡಿ, ಅಂದಪ್ಪ ಮಾದರ, ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-23-2016846191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.