ನರೇಗಲ್: ವಿದ್ಯೆ ಕಲಿಸಿದ ಗುರುಗಳನ್ನು ಸ್ಮರಿಸುವುದರಿಂದ ಸದ್ಗತಿ ದೊರೆಯುತ್ತದೆ ಮತ್ತು ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಅನ್ನದಾನ ವಿಜಯ ವಿದ್ಯಾಪ್ರಸಾರಕ ಸಮಿತಿಯ ಆಡಳಿತಾಧಿಕಾರಿ ಡಾ.ಜಿ.ಕೆ. ಕಾಳೇ ಹೇಳಿದರು.

ಅನ್ನದಾನ ವಿಜಯ ಬಾಲಕಿಯರ ಪ್ರೌಢಶಾಲೆ 2005-6ನೇ ಸಾಲಿನ ಹಳೇ ವಿದ್ಯಾರ್ಥಿನಿಯರಿಂದ ಪಟ್ಟಣದ ಅನ್ನದಾನೇಶ್ವರ ಶಿವಾನುಭವ ಮಂಟಪದಲ್ಲಿ ಈಚೆಗೆ ನಡೆದ ಗುರುವಂದನೆ ಹಾಗೂ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಇರುತ್ತದೆ. ಹಾಗಾಗಿ ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಶ್ರಮ ದೊಡ್ಡದು ಎಂದರು.

ಸಮಿತಿ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ, ಮುಖ್ಯ ಶಿಕ್ಷಕ ಎಸ್.ಎನ್. ಹೂಲಗೇರಿ, ರೇಖಾ ಮಡಿವಾಳ, ರೇಖಾ ಉಳ್ಳಾಗಡ್ಡಿ, ಸ್ನೇಹಾ ಕಣಿವಿ, ಮಂಜುಳಾ ಪಾಚಂಗಿ, ಸಾವಿತ್ರಿ ಬಳ್ಳಾರಿ, ಎ.ಟಿ. ಮಳ್ಳಳ್ಳಿ, ಬಿ.ಡಿ. ಯರಗೊಪ್ಪ, ಎಂ.ಎಸ್. ಅತ್ತಾರ್, ರಮೇಶ ಶಿಳ್ಳಿನ, ಬಸಮ್ಮ ಅಸುಂಡಿ, ಸಂಗಮೇಶ ಕುರಡಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-23-1347670937

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.