ನರಗುಂದ: ‘ಸರ್ಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳನ್ನುನೀಡಲಾಗುತ್ತಿದೆ. ಇದರ ಜೊತೆಗೆ ಉತ್ತಮ ಬೋಧನೆ ನಡೆಯುತ್ತಿದೆ.ಇದನ್ನು ಪಾಲಕರಿಗೆ ಮನವರಿಕೆ ಮಾಡಿಕೊಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ದಾಖಲಾತಿ ಆಗುವಂತೆ ಮುಖ್ಯಶಿಕ್ಷಕರು ಹೆಚ್ಚಿನ ಶ್ರಮ ವಹಿಸಬೇಕು’ ಎಂದು ಗದಗ ಜಿಲ್ಲಾ ಡಿಡಿಪಿಐ ಆರ್.ಎಸ್.ಬುರಡಿ ಹೇಳಿದರು.

ಪಟ್ಟಣದ ರೋಟ್ರಾಕ್ಟ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಶನಿವಾರ ನಡೆದ ತಾಲ್ಲೂಕಿನ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು.

2025 26ನೇ ಸಾಲಿನ ವಿಶೇಷ ದಾಖಲಾತಿ ಜಾಗೃತಿ ಅಭಿಯಾನದಯಡಿ ಸರ್ಕಾರಿ ಶಾಲೆಗಳಿಗೆ 2026– 27ನೇ ಸಾಲಿಗೆ ಒಂದನೇ ತರಗತಿಗೆ ಹೆಚ್ಚು ಮಕ್ಕಳನ್ನು ದಾಖಲು ಮಾಡಿಕೊಳ್ಳಲು ಎಲ್ಲ ಶಿಕ್ಷಕರು ಶ್ರಮ ಹಾಕಬೇಕು ಎಂದರು.

ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ದಾಖಲಾತಿ ಆದರೆ ಶ್ರಮಕ್ಕೆ ಪ್ರತಿಫಲ ದೊರೆಯುತ್ತದೆ. ಗುಣಮಟ್ಟದ ಶಿಕ್ಷಣಕ್ಕೆ, ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು, ಏಳು ದಿನ ಗೈರು ಇರುವ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕಾರ್ಯಕ್ರಮದ ಕುರಿತು ಸಮಗ್ರವಾಗಿ ವಿವರಿಸಿದರು.

ಸಭೆಯಲ್ಲಿ ಡಯಟ್ ಉಪನ್ಯಾಸಕ ಹಾಗೂ ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಎಚ್.ಬಿ.ರಡ್ಡೇರ ಮಾತನಾಡಿ, ‘ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯಮಾಪನಕ್ಕೆ ತಮ್ಮ ಶಾಲೆಯ ಶಿಕ್ಷಕರನ್ನು ಎಪ್ರಿಲ್ 8ರಂದು ಬಿಡುಗಡೆ ಮಾಡಬೇಕು’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಕಂಬಳಿ ಮಾತನಾಡಿದರು. ಸಭೆಯಲ್ಲಿ ರೋಟ್ರಾಕ್ಟ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪಿ.ವಿ.ಕೆಂಚನಗೌಡ್ರ, ಬಿಆರ್ಪಿ ಬಿ.ಆರ್.ರಾಯನಗೌಡ್ರ, ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಸಿಆರ್ಪಿ ಮತ್ತು ಬಿಆರ್ಪಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-23-1748186425

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.