ನವಲಗುಂದ: ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಏ.22ರಂದು ಬೆಳಿಗ್ಗೆ 10 ಗಂಟೆಯಿಂದ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದೆ.

ಕಾಲೇಜಿನ ಐ.ಕ್ಯು.ಎ.ಸಿ, ಭಾರತೀಯ ಯುವ ರೆಡ್ ಕ್ರಾಸ್, ಎನ್.ಎಸ್.ಎಸ್., ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಘಟಕಗಳು ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ರೋಟರಿ ಬ್ರಾಡ್ ಬ್ಯಾಂಕ್ ಧಾರವಾಡ ಇವರ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದರೆ ಅಗತ್ಯವಿರುವ ರೋಗಿಗಳಿಗೆ ಸಹಾಯವಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ. ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯವಾಗಿದ್ದು, ಪ್ರತಿಯೊಬ್ಬರೂ ಇದರ ಮಹತ್ವವನ್ನು ಅರಿತು ಶಿಬಿರವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಆಸಕ್ತರು 9742843882 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಕಾಲೇಜು ಪ್ರಾಚಾರ್ಯ ಎಂ.ಬಿ.ಬಾಗಡಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-24-1134879235

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.