ನವಲಗುಂದ: ‘ವಿದ್ಯಾರ್ಥಿಗಳು ಶಾಲೆಯಲ್ಲಿ ಸರ್ಕಾರದ ವತಿಯಿಂದ ದೊರೆಯುವ ಸೌಲಭ್ಯ ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಡಿ.ರಂಗಣ್ಣವರ ಹೇಳಿದರು.

ತಾಲ್ಲೂಕಿನ ಜಾವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಶುಕ್ರವಾರ ಪಠ್ಯಪುಸ್ತಕಗಳನ್ನು ವಿತರಿಸಿ ಮಾತನಾಡಿ, ಶಿಕ್ಷಣದಿಂದ ಮಾತ್ರ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದರು.

ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ ಹಿರೆಗಣ್ಣವರ ಮಾತನಾಡಿ, ‘ಸರ್ಕಾರದ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಪಠ್ಯ ಪುಸ್ತಕ, ಸಮವಸ್ತ್ರ, ಬಿಸಿಯೂಟ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ನೀಡುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಿ ಎಂದರು.

ಶಿಕ್ಷಕರಾದ ಎಸ್.ಎನ್.ಅಕ್ಕಿಮರಡಿ, ಎಂ.ಪಿ.ಶಿವಪೂಜಿಮಠ, ಸರಿತಾ ಕೊಪ್ಪದ, ಎಂ.ಎಂ.ನಾಯ್ಕರ ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-24-192273135

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.