ನಾಯಕನಹಟ್ಟಿ: ‘ಕನ್ನಡ ಭಾಷೆಯ ಬೆಳವಣಿಗೆಗೆ ಸಹಕಾರಿಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಬೃಹತ್ ಭಾಷಾ ನಿಘಂಟು ಕನ್ನಡಿಗರ ಹೆಮ್ಮೆಯ ಸಂತೇಕವಾಗಿದೆ’ ಎಂದು ಇಂದಿರಾ ಪ್ರಿಯದರ್ಶಿನಿ ವಸತಿ ಶಾಲೆಯ ಪ್ರಾಚಾರ್ಯ ಡಿ.ಶಿವರಾಜ್ ಹೇಳಿದರು.

ನಾಯಕನಹಟ್ಟಿಯಲ್ಲಿ ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಕಸಾಪ 112ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು.

‘ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ನಿರ್ಲಕ್ಷ್ಯ ಧೋರಣೆ ಹೆಚ್ಚುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಕಷ್ಟವಾಗುತ್ತದೆ. ರಾಜ್ಯದಲ್ಲಿ ಕೆಪಿಎಸ್ಸಿ ಸೇರಿದಂತೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಕಡ್ಡಾಯ ವಿಷಯವಾಗಿದೆ. ವ್ಯಾಕರಣ, ವಾಕ್ಯ ರಚನೆಗಳನ್ನು ಕಡ್ಡಾಯವಾಗಿ ಕಲಿಯಬೇಕು’ ಎಂದರು.

‘ಕನ್ನಡದ ಮೌಖಿಕ ಸಾಹಿತ್ಯವು ದೊಡ್ಡ ಇತಿಹಾಸ ಹೊಂದಿದೆ. ಚಳ್ಳಕೆರೆ ತಾಲ್ಲೂಕಿನ ಸಿರಿಯಜ್ಜಿ ಸಾವಿರಾರು ಹಾಡುಗಳನ್ನು ನೆನಪಿನಲ್ಲಿಟ್ಟುಕೊಂಡು ಹಾಡುತ್ತಿದ್ದರು. ಇಂತಹ ಮೌಖಿಕ ಪರಂಪರೆ ಈಚೆಗೆ ನಶಿಸುತ್ತಿದೆ. ಜೊತೆಗೆ ಲಿಖಿತ ಸಾಹಿತ್ಯವನ್ನು ಅಭ್ಯಾಸ ಮಾಡುವ ಸಂಸ್ಕೃತಿಯನ್ನು ಉಳಿಸಬೇಕಾಗಿದೆ. ರಾಜ್ಯ ಸರ್ಕಾರದ ದ್ವಿಭಾಷೆ ಮತ್ತು ತ್ರಿಭಾಷಾ ಸೂತ್ರದ ಬಗ್ಗೆ ಇರುವ ಗೊಂದಲಗಳು ಪೂರ್ಣವಾಗಿ ನಿವಾರಣೆಯಾಗಬೇಕು’ ಎಂದು ಹಿರಿಯೂರಿನ ಯಾಜ್ಞವಲ್ಕ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎನ್. ಶಿವಾನಂದ ಆಗ್ರಹಿಸಿದರು.

ಕಸಾಪ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಬಿ.ಎಂ. ತಿಪ್ಪೇರುದ್ರಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಖಜಾಂಚಿ ಸಿ.ಲೋಕೇಶ, ಕಾರ್ಯದರ್ಶಿ ವಿ.ಧನಂಜಯ, ಮುಖ್ಯಶಿಕ್ಷಕಿಯರಾದ ಟಿ.ರೂಪಾ, ಎ.ಉಮಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-44-1483705630

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.