ನಾಯಕನಹಟ್ಟಿ: ಕಾಲೇಜು ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಮತ್ತು ಸೇವಾ ಮನೋಭಾವ ಬೆಳೆಸಲು ಎನ್ಎಸ್ಎಸ್ ಶಿಬಿರ ಸಹಕಾರಿಯಾಗಲಿದೆ ಎಂದು ಎಸ್ಟಿಎಸ್ಆರ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ.ವೈ.ಟಿ. ಸ್ವಾಮಿ ಹೇಳಿದರು.

ಹೋಬಳಿಯ ಮನುಮೈನಹಟ್ಟಿ ಗ್ರಾಮದಲ್ಲಿ ನಾಯಕನಹಟ್ಟಿಯ ಎಚ್ಎಂಟಿ ಪ್ರಥಮದರ್ಜೆ ಕಾಲೇಜಿನಿಂದ ಹಮ್ಮಿಕೊಂಡಿರುವ ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟಿಸಿ ಮಂಗಳವಾರ ಮಾತನಾಡಿದರು.

ಸಂಸ್ಥೆಯ ಮೂಲ ತತ್ವವು ವಿದ್ಯಾರ್ಥಿಗಳಿಗೆ ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ಭಾಗಿಯಾಗುವ ಅನುಭವವನ್ನು ನೀಡುವುದು ಹಾಗೂ ರಾಷ್ಟ್ರಪ್ರೇಮ ಮತ್ತು ಸೇವಾ ಮನೋಭಾವ ಬೆಳೆಸುವುದಾಗಿದೆ. ಹಾಗಾಗಿ ಎನ್ಎಸ್ಎಸ್ ‘ನನಗಲ್ಲ, ನಿನಗೆ’ ಎಂಬ ಧ್ಯೇಯವಾಕ್ಯವನ್ನು ಹೊಂದಿದೆ.

ಪ್ರತಿಯೊಬ್ಬರೂ ನಿಸ್ವಾರ್ಥ ಸೇವೆಯ ಜೊತೆಗೆ ಸಮಾಜದೊಂದಿಗೆ ಬೆರೆತು ಮಾನವೀಯತೆ ಎತ್ತಿ ಹಿಡಿಯುವ ಅಗತ್ಯವನ್ನು ಎನ್ಎಸ್ಎಸ್ ಬಿಂಬಿಸುತ್ತದೆ. ಆ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಪರಿಸರ ಸಂರಕ್ಷಣೆ, ಗ್ರಾಮೀಣ ಜನರಲ್ಲಿ ಆರೋಗ್ಯ, ಶ್ರಮದಾನ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಜಾಗೃತಿ ಮೂಡಿಸಲಾಗುತ್ತದೆ. ಶಿಬಿರದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಎನ್ಎಸ್ಎಸ್ ಧ್ಯೇಯವನ್ನು ಪಾಲಿಸಬೇಕು ಎಂದರು.

ಮುಖಂಡ ಎಚ್.ಶಿವಣ್ಣ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಸ್ಥರಾದ ಜಿ.ಪಿ. ಬಸವರಾಜ್, ಕೆ.ಮಂಜುನಾಥ, ಎಂ.ಪಾಲಯ್ಯ, ರವಿಕುಮಾರ್, ಆರೋಗ್ಯ ಇಲಾಖೆಯ ಸುಧಾ, ಶಿಕ್ಷಕ ಜಿ.ವೈ.ತಿಪ್ಪೇಸ್ವಾಮಿ, ಎಚ್.ಸಿ. ರಾಜೆಂದ್ರ, ಪ್ರಾಚಾರ್ಯರಾದ ಸಂಗೀತ, ಪದ್ಮನಾಭ್ಶಾಸ್ತ್ರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-44-1973059088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.