ಬೆಂಗಳೂರು: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್ಸಿಇಆರ್ಟಿ) ಪಠ್ಯಕ್ರಮ ದಲ್ಲಿ ‘ಅಂತರ್ಜಲ’ ಕುರಿತ ಪ್ರತ್ಯೇಕ ಅಧ್ಯಾಯವನ್ನು ಅಳವಡಿಸುವಂತೆ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಹವಾಮಾನ ಬದಲಾವಣೆ ಮತ್ತು ಅಂತರ್ಜಲದ ಅತಿ ಬಳಕೆಯಿಂದ ಭವಿಷ್ಯದಲ್ಲಿ ಎದುರಾಗಬಹುದಾದಜಲಕ್ಷಾಮ ತಪ್ಪಿಸಲು ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕಿದೆ. ಪ್ರಸ್ತುತ ಎನ್ಸಿಇಆರ್ಟಿ 10ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ‘ಜಲ ಸಂಪನ್ಮೂಲಗಳು’ ಎಂಬ ಅಧ್ಯಾಯವಿದ್ದರೂ, ಅದರಲ್ಲಿ ಕೇವಲ ಮೇಲ್ಮೈ ಜಲಕ್ಕೆ ಒತ್ತು ನೀಡಲಾಗಿದೆ. ಭೂಮಿಯ ಮೇಲಿರುವ ದ್ರವರೂಪದ ಸಿಹಿ ನೀರಿನಲ್ಲಿ ಶೇ 97ರಷ್ಟು ಪಾಲು ಅಂತರ್ಜಲದ ರೂಪದಲ್ಲಿದೆ. ದೇಶದ ಶೇ 50ರಷ್ಟು ಗೃಹಬಳಕೆ ಹಾಗೂ ಶೇ 5ರಷ್ಟು ಕೃಷಿಯು ನೀರಿಗಾಗಿ ಅಂತರ್ಜಲವನ್ನೇ ಅವಲಂಬಿಸಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಪ್ರತಿ ವರ್ಷ ನೀರಿನ ಬಳಕೆಯು ಶೇ 1ರಷ್ಟು ಹೆಚ್ಚಾಗುತ್ತಿದ್ದು, ಹವಾಮಾನ ಬದಲಾವಣೆಯಿಂದಾಗಿಮೇಲ್ಮೈ ಜಲದ ಲಭ್ಯತೆ ಕಡಿಮೆಯಾಗುತ್ತಿದೆ.ಅಂತರ್ಜಲದ ಮೇಲಿನ ಅವಲಂಬನೆ ಇನ್ನಷ್ಟು ತೀವ್ರವಾಗಲಿದೆ. ಕಳೆದ ಎರಡು ದಶಕಗಳಲ್ಲಿ ಅತಿ-ಬಳಕೆಯ ಮತ್ತು ಅಪಾಯಕಾರಿ ಮಟ್ಟದಲ್ಲಿರುವ ಅಂತರ್ಜಲ ಪ್ರದೇಶಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಅಂತರ್ಜಲ ಕಲುಷಿತಗೊಳ್ಳುತ್ತಿರುವ ಬೆನ್ನಲ್ಲೇ ಅಂತರ್ಜಲದ ಗುಣಮಟ್ಟವೂ ನಿರಂತರವಾಗಿ ಕುಸಿಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-4-322655434

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.