ಬೆಂಗಳೂರು: ‘2026–27ನೇ ಸಾಲಿನಿಂದ ಬ್ಯಾಚುಲರ್ ಆಫ್ ಫಿಸಿಯೋ ಥೆರಪಿ (ಬಿಪಿಟಿ) ಮತ್ತು ಬ್ಯಾಚುಲರ್ ಆಫ್ ಆಕ್ಯುಪೇಷನಲ್ ಥೆರಪಿ (ಬಿಒಟಿ) ಕೋರ್ಸ್ಗಳಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಮೂಲಕ ಮಾತ್ರ ಪ್ರವೇಶ ನೀಡುವಂತೆ ರಾಷ್ಟ್ರೀಯ ಸಹಾಯಕ ಮತ್ತು ಆರೋಗ್ಯ ವೃತ್ತಿಗಳ ಆಯೋಗ ತಿಳಿಸಿದೆ’ ಎಂದು ರಾಜ್ಯ ಅಲೈಡ್ ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಯು.ಟಿ. ಇಫ್ತಿಕಾರ್ ಅಲಿ ತಿಳಿಸಿದ್ದಾರೆ.

‘ಇದೇ 9ರಂದು ಪತ್ರ ಬರೆದಿರುವ ಎನ್ಸಿಎಎಚ್ಪಿ, ಬಿಪಿಟಿ ಮತ್ತು ಬಿಒಟಿ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ (ಎನ್ಟಿಎ) ಸೂಚನೆ ನೀಡಲಾಗಿದೆ. ಅಲ್ಲದೆ, ಪ್ರವೇಶಕ್ಕೆ ಅನುಸರಿಸಬೇಕಾದ ಮಾನದಂಡಗಳನ್ನು 2026–27ನೇ ಸಾಲಿನಿಂದ ಜಾರಿಗಳಿಸಲು ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೂ (ಯುಜಿಸಿ) ತಿಳಿಸಿದೆ. ಎನ್ಸಿಎಎಚ್ಪಿ ಕಾಯ್ದೆ 2021ರ ಪ್ರಕಾರ ನೀಟ್ ಮೂಲಕ ಮಾತ್ರ ಕೋರ್ಸ್ಗಳಿಗೆ ಪ್ರವೇಶ ನೀಡಬೇಕು’ ಎಂದಿದ್ದಾರೆ.

‘ರಾಜ್ಯದಲ್ಲಿರುವ ಸರ್ಕಾರಿ, ಖಾಸಗಿ, ಡೀಮ್ಡ್ ಸೇರಿದಂತೆ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು ಎನ್ಸಿಎಎಚ್ಪಿ ನೀಡಿರುವ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.