ಲಾತೂರ್ (ಪಿಟಿಐ): ‘ನೀಟ್–ಯುಜಿ’ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಆರೋಪಿ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್ ಅವರ ಒಡೆತನದ ರೇಣುಕೈ ಕರಿಯರ್ ಸೆಂಟರ್ನ ವಿರುದ್ಧ ಮಹಾರಾಷ್ಟ್ರ ನವ ನಿರ್ಮಾಣ ಸೇನಾ (ಎಂಎನ್ಎಸ್) ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಇಲ್ಲಿರುವ ರೇಣುಕೈ ಕರಿಯರ್ ಸೆಂಟರ್ನ ಪ್ರಧಾನ ಕಚೇರಿಯ ಎದುರು ಎಂಎನ್ಎಸ್ ಕಾರ್ಯಕರ್ತರು ಜಮಾಯಿಸಿ, ಕೋಚಿಂಗ್ ಸೆಂಟರ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಸಾವಿರಾರು ವಿದ್ಯಾರ್ಥಿಗಳಿಂದ ಸಂಗ್ರಹಿಸಿರುವ ಶುಲ್ಕವನ್ನು ಕೋಚಿಂಗ್ ಸೆಂಟರ್ ಮರಳಿಸಬೇಕು ಎಂದೂ ಆಗ್ರಹಿಸಿದ್ದಾರೆ.

ನೀಟ್ ಪರೀಕ್ಷೆ ನಡೆಯುವ 10 ದಿನಗಳ ಮುಂಚೆಯೇ ರಸಾಯನ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಶಿವರಾಜ್ ಅವರಿಗೆ ತಲುಪಿತ್ತು ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಭಾನುವಾರ ಶಿವರಾಜ್ ಅವರನ್ನು ಬಂಧಿಸಿದ್ದಾರೆ. ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡಿದ ಹಾಗೂ ಹಂಚಿದ ತಂಡದಲ್ಲಿ ಶಿವರಾಜ್ ಸಕ್ರಿಯ ಸದಸ್ಯರಾಗಿದ್ದರು ಎಂದೂ ಸಿಬಿಐ ಆರೋಪಿಸಿದೆ.

ಈ ಕಾರಣದಿಂದ ಕೋಚಿಂಗ್ ಸೆಂಟರ್ ವಿರುದ್ಧ ಎಂಎನ್ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನೀಟ್ ಪರೀಕ್ಷೆ ವಿವಾದದಿಂದ ಮಹಾರಾಷ್ಟ್ರದಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದೂ ಆರೋಪಿಸಿ, ಕೋಚಿಂಗ್ ಸೆಂಟರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-51-750605382

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.