ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಂಡಿದೆ. ಇನ್ನೊಂದೆಡೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮರು ಪರೀಕ್ಷೆ ಆಯೋಜಿಸಿದೆ. ಇದೀಗ ನೀಟ್ ಮರು ಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೂಲಕ ಪ್ರಶ್ನೆ ಪತ್ರಿಕೆಗಳು ಸಿಗುತ್ತವೆ ಎಂದು ಹೇಳಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಟೆಲಿಗ್ರಾಮ್ ಗ್ರೂಪ್ಗಳ ಮೂಲಕ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಸಂದೇಶಗಳನ್ನು ರವಾನಿಸಲಾಗುತ್ತದೆ ಎಂದು ವಿದ್ಯಾರ್ಥಿಗಳು ಆರೋಪಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ವಿಶೇಷವಾಗಿ ನೀಟ್ ಮರು ಪರೀಕ್ಷೆ (ReNEET) ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆಯಾಗಲಿದೆ ಎಂದು ವಿಡಿಯೊದಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಈ ವಿಡಿಯೊ ಸಂದೇಶವು ಪರೀಕ್ಷೆಯ ಆಯ್ಕೆ ಪ್ರಕ್ರಿಯೆಯ ವಿಶ್ವಾಸಾರ್ಹತೆಯ ಮೇಲೆ ತೀವ್ರ ಕಳವಳ ಹುಟ್ಟುಹಾಕಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ವಿಡಿಯೊದಲ್ಲಿ, ‘ನೀಟ್ ಮರು ಪರೀಕ್ಷೆಯ ಪತ್ರಿಕೆಯ ಪ್ರಶ್ನೆಗಳು ಪಡೆಯಲು ಟೆಲಿಗ್ರಾಮ್ ಗ್ರೂಪ್ಗಳಲ್ಲಿ ಅವಕಾಶವಿದೆ. ಅಲ್ಲಿ ‘ಆಯ್ಕೆಯ ನಂತರ ಪಾವತಿಸಿ’ ಅಂದರೆ, ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕವೇ ಪಾವತಿಸಿ ಎಂಬ ಆಯ್ಕೆ ಕೂಡ ನೀಡಲಾಗುತ್ತದೆ’ ಎಂದು ಕಾರು ಚಾಲಕನ ಜೊತೆ ವಿದ್ಯಾರ್ಥಿಗಳು ಮಾತನಾಡಿದ್ದಾರೆ.

ಸದ್ಯ, ವಿಡಿಯೊದಲ್ಲಿ ವಿದ್ಯಾರ್ಥಿಗಳು ಮಾತನಾಡಿರುವ ಸಂದೇಶದ ಕುರಿತು ಸತ್ಯಾಸತ್ಯತೆ ತಿಳಿಯಲು ಯಾವುದೇ ತನಿಖೆ ನಡೆಯುತ್ತಿಲ್ಲ. ಆದರೆ, ಇತ್ತೀಚೆಗೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದರಿಂದ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಈ ಕ್ಲಿಪ್ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಭಯ ಉಂಟು ಮಾಡುತ್ತಿದೆ.

ಮರು ಪರೀಕ್ಷೆಯ ದಿನಾಂಕ ಘೋಷಣೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಬಳಿಕ ದೇಶದಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಹಿಂದಿನ ನೀಟ್–ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ, ಜೂನ್ 21ರಂದು ಮರು ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ. ಈ ನಡುವೆ, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊಗಳು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.