ಚಿಕ್ಕಬಳ್ಳಾಪುರ: ‘ನೀಟ್–ಯುಜಿ’ ಅಕ್ರಮ ನಡೆದರೆ ಅದರಲ್ಲಿ ಮೋದಿ ಸರ್ಕಾರದ ಯಾವುದೇ ತಪ್ಪು ಇಲ್ಲ ಎನ್ನುವ ಬಿಜೆಪಿ ನಾಯಕರು ಸಿಇಟಿ ವೇಳೆ ವಿದ್ಯಾರ್ಥಿ ಜನಿವಾರ ತೆಗೆಸಿದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಯಾವೆಲ್ಲಾ ಪದಗಳನ್ನು ಬಳಸಿ ಟೀಕಿಸಿದರು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಇಟಿ ವೇಳೆ ಎರಡು, ಮೂರು ಕೇಂದ್ರಗಳಲ್ಲಿ ಮೂರ್ನಾಲ್ಕು ವಿದ್ಯಾರ್ಥಿಗಳಿಗೆ ತೊಂದರೆ ಆಯಿತು. ಜನಿವಾರ ತೆಗೆಸಿದಾಗ ಬಿಜೆಪಿಯ ಆರ್. ಅಶೋಕ, ತೇಜಸ್ವಿ ಸೂರ್ಯ ಏನೆಲ್ಲಾ ಮಾತನಾಡಿದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ 22 ಲಕ್ಷ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಈಗ ಏಕೆ ಅವರು ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರದ ರಾಜ್ಯಗಳಲ್ಲಿ ಪರೀಕ್ಷೆಗಳಲ್ಲಿ ಸಮಸ್ಯೆಗಳು ನಡೆದರೆ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಕೇಂದ್ರ ಸರ್ಕಾರ ಜನರ ಕ್ಷಮೆಕೋರಬೇಕು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಹೊಣೆ ಯಾರು? ಮೊದಲು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ನೀಟ್ ವ್ಯವಸ್ಥೆಯೇ ಸರಿ ಇಲ್ಲ. ಪರೀಕ್ಷೆಯನ್ನೇ ರದ್ದುಗೊಳಿಸಬೇಕು. ದಕ್ಷಿಣ ರಾಜ್ಯದ ಮಕ್ಕಳಿಗೆ ತೊಂದರೆ ಆಗುತ್ತಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ವಾಮಮಾರ್ಗ ಹುಡುಕಲಾಗುತ್ತಿದೆ. ಸಿಬಿಐ ತನಿಖೆ ನಡೆಸಿ ಏನು ಮಾಡುವಿರಿ? ಕಾನೂನು ರೀತಿ ಮಕ್ಕಳು ಮರು ಪರೀಕ್ಷೆ ಬರೆಯಲೇಬೇಕಲ್ಲ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-51-134668679

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.