ಬಾವಗಿ(ಜನವಾಡ): 2026ನೇ ಸಾಲಿನ ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯನ್ನು ರದ್ದುಪಡಿಸಬೇಕು ಎಂದು ಬೀದರ್ ತಾಲ್ಲೂಕಿನ ಬಾವಗಿ ಗ್ರಾಮದ ಭದ್ರೇಶ್ವರ ಮಠದ ಶಿವಕುಮಾರ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದಿರುವ ವ್ಯಕ್ತಿಗಳು ಹಾಗೂ ಕೋಚಿಂಗ್ ಮಾಫಿಯಾವನ್ನು ಪತ್ತೆ ಹಚ್ಚಬೇಕು. ಅನ್ಯಾಯದ ವಿರುದ್ಧ ವಿದ್ಯಾರ್ಥಿಗಳು ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ಹೇಳಿದ್ದಾರೆ.

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ತೀವ್ರ ಖಂಡನೀಯ. ಇದು, ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಕನಸಿನ ಮೇಲೆ ನಡೆದ ದಾಳಿಯಾಗಿದೆ. ಕೆಲವರ ಲಾಭಕ್ಕಾಗಿ ಶಿಕ್ಷಣ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ನಾಶ ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-33-1865513936

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.