ಬೆಳ್ತಂಗಡಿ: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಎಸ್ಎಸ್ಎಫ್ ಬೆಳ್ತಂಗಡಿ ತಾಲ್ಲೂಕು ಸಮಿತಿಯಿಂದ ಬೆಳ್ತಂಗಡಿಯಲ್ಲಿ ರ್ಯಾಲಿ, ಪ್ರತಿಭಟನೆ ನಡೆಯಿತು.

ಎಸ್ಎಸ್ಎಫ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ, ‘ನೀಟ್ನಂಥ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಪ್ರಮುಖ ವೇದಿಕೆಗಳಾಗಿವೆ. ಪ್ರಾಮಾಣಿಕವಾಗಿ ಅಧ್ಯಯನ ಮಾಡುವ ವಿದ್ಯಾರ್ಥಿಗಳ ವಿಶ್ವಾಸವನ್ನು ಪ್ರಶ್ನೆ ಪತ್ರಿಕೆ ಸೋರಿಕೆಯಂಥ ಅಕ್ರಮಗಳು ಕುಗ್ಗಿಸುತ್ತಿವೆ. ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನೇ ದುರ್ಬಲಗೊಳಿಸುತ್ತಿವೆ’ ಎಂದರು.

ಘಟನೆಯಿಂದಾಗಿ ಸತ್ಯನಿಷ್ಠ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಅವರಲ್ಲಿ ಮಾನಸಿಕ ಒತ್ತಡ ಮತ್ತು ಆತಂಕ ಉಂಟಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ ಮತ್ತು ನ್ಯಾಯವನ್ನು ಎತ್ತಿ ಹಿಡಿಯಲು ಇಂಥ ಅಕ್ರಮಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅಗತ್ಯ. ಪ್ರಕರಣದ ಸಂಚು ರೂಪಿಸಿದವರು ಮತ್ತು ಭಾಗಿಯಾದ ಆರೋಪಿಗಳ ವಿರುದ್ಧ ಕ್ರಮ ಜರುಗಿಸಬೇಕು. ಪರೀಕ್ಷಾ ವ್ಯವಸ್ಥೆಯಲ್ಲಿ ಅತ್ಯಾಧುನಿಕ ಭದ್ರತಾ ಕ್ರಮಗಳನ್ನು ಅಳವಡಿಸಬೇಕು’ ಎಂದರು.

ಕಾರ್ಯದರ್ಶಿ ಹಾಫಿಳ್ ಬಾಸಿತ್ ಸಖಾಫಿ ರ್ಯಾಲಿಗೆ ಚಾಲನೆ ನೀಡಿದರು. ರಾಜ್ಯ ಘಟಕದ ಕಾರ್ಯದರ್ಶಿ ರಶೀದ್ ಮಡಂತ್ಯಾರು ಉದ್ಘಾಟಿಸಿದರು. ಕ್ಯಾಂಪಸ್ ಕಾರ್ಯದರ್ಶಿ ರಾಝಿಕ್ ಮಡಂತ್ಯಾರು ನೀಟ್ ಪರೀಕ್ಷೆಯ ಅವ್ಯವಹಾರದ ಬಗ್ಗೆ ವಿವರಿಸಿದರು.

ಬೆಳ್ತಂಗಡಿ ವಿಭಾಗದ ಅಧ್ಯಕ್ಷ ಇಸಾಕ್ ಅಳದಂಗಡಿ ಅಧ್ಯಕ್ಷತೆ ವಹಿಸಿದ್ದರು.

ಎಸ್.ವೈ.ಎಸ್ ಕಾರ್ಯದರ್ಶಿ ಸಲೀಂ ಕನ್ಯಾಡಿ, ಮುಖಂಡರಾದ ಎಂ.ಶರೀಫ್ ಬೆರ್ಕಳ, ಇಕ್ಬಾಲ್ ಮಾಚಾರು, ಮುಬೀನ್ ಉಜಿರೆ, ರಫೀಕ್ ತುರ್ಕಳಿಕೆ, ಖಲಂದರ್ ಪರಪ್ಪು, ಸಿದ್ದೀಕ್ ಪರಪ್ಪು, ತಾಲೂಕಿನ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಮುಖಂಡರು ಭಾಗವಹಿಸಿದ್ದರು.

ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಘಟಕದ ಕಾರ್ಯದರ್ಶಿ ನವಾಝ್ ಮಾವಿನಕಟ್ಟೆ ಸ್ವಾಗತಿಸಿ, ವಿಭಾಗ ಪ್ರಧಾನ ಕಾರ್ಯದರ್ಶಿ ನಾಸೀರ್ ಪಡ್ಡಂದಡ್ಕ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-29-833569600

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.