ನಿಪ್ಪಾಣಿ: ಎಂಜಿನಿಯರಿಂಗ್ ಮೊದಲು ಸವಾಲಿನಿಂದ ಕೂಡಿರುತ್ತದೆ. ಸ್ಥಿರತೆ, ತಾಳ್ಮೆ, ಶಿಸ್ತು ಮತ್ತು ನಿರಂತರ ಕಲಿಕೆಯ ಮೂಲಕ ಇಲ್ಲಿ ಯಶಸ್ಸು ಸಿಗುತ್ತದೆ. ಕಾಲೇಜಿನಲ್ಲಿ ಬೆಳೆಸಿಕೊಳ್ಳುವ ಉತ್ತಮ ಅಭ್ಯಾಸಗಳು ದೀರ್ಘಾವಧಿಯ ವೃತ್ತಿಪರ ಯಶಸ್ಸು ರೂಪಿಸುತ್ತದೆ ಎಂದು ಧಾರವಾಡದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿಯ ನಿರ್ದೇಶಕ ರಮೇಶ ರತಗೇರಿ ಹೇಳಿದರು.

ಸ್ಥಳೀಯ ವಿಎಸ್ಎಂ ಸೋಮಶೇಖರ ಆರ್.ಕೋಠಿವಾಲೆ ತಾಂತ್ರಿಕ ಮಹಾ ವಿದ್ಯಾಲಯ (ವಿಎಸ್ಎಂಎಸ್ ಆರ್ಕೆಐಟಿ) ದಲ್ಲಿ ಜರುಗಿದ ’ಹರ್ಷೋತ್ಸವ – 2026’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪಂಚಾಯತ್ ರಾಜ್ ಇಲಾಖೆಯ ಚಿಕ್ಕೋಡಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರವೀಣ ಮಠಪತಿ ಮಾತನಾಡಿ ’ಆತ್ಮವಿಶ್ವಾಸದಿಂದ, ಕುತೂಹಲದಿಂದ ಕಲಿಯಬೇಕು, ಸಮರ್ಪಣಾಭಾವದಿಂದ ಕೆಲಸ ಮಾಡಬೇಕು ಮತ್ತು ನಮ್ರತೆಯಿಂದ ಮುನ್ನಡೆದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು.

ಅಧ್ಯಕ್ಷತೆ ವಹಿಸಿದ್ದ ವಿದ್ಯಾ ಸಂವರ್ಧಕ ಮಂಡಳದ ಕಾರ್ಯಾಧ್ಯಕ್ಷ ಚಂದ್ರಕಾಂತ ಕೋಠಿವಾಲೆ ಮಾತನಾಡಿ ’ಗಡಿಭಾಗದ ಬಡವಿದ್ಯಾರ್ಥಿಗಳ ಸಹಿತ ಎಲ್ಲರೂ ಉನ್ನತ ಶಿಕ್ಷಣ ಸಹಜವಾಗಿ ಪಡೆಯಬೇಕೆಂಬ ಉದ್ದೇಶದಿಂದ ತಾಂತ್ರಿಕ ಮಹಾವಿದ್ಯಾಲಯ ಆರಂಭಿಸಲಾಗಿದೆ. ಬಡತನದಿಂದ ಉನ್ನತ ಶಿಕ್ಷಣ ನಿಲ್ಲದು ಎಂಬುದನ್ನು ವಿದ್ಯಾರ್ಥಿಗಳು ತೋರಿಸಿಕೊಟ್ಟಿದ್ದಾರೆ ಎಂದರು.

ಮಂಡಳದ ಸಂಚಾಲಕ ಸಂಜಯ ಶಿಂತ್ರೆ, ಸಿಇಒ ಸಿದ್ಧಗೌಡ ಪಾಟೀಲ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿ.ಇ. ಮತ್ತು ಡಿಪ್ಲೋಮಾದಲ್ಲಿಯ ಎಲ್ಲ ವಿಭಾಗಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮತ್ತು ಉನ್ನತ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ನಗದು ಬಹುಮಾನಗಳನ್ನು ಗಣ್ಯರು ವಿತರಿಸಿದರು. ಪ್ರಾಚಾರ್ಯ ಉಮೇಶ ಪಾಟೀಲ ವಾರ್ಷಿಕ ವರದಿ ವಾಚಿಸಿದರು.

ಮಂಡಳದ ಅಧ್ಯಕ್ಷ ಚಂದ್ರಕಾಂತ ತಾರಳೆ, ಉಪಾಧ್ಯಕ್ಷ ಎಂಜಿನಿಯರ್ ಸುನೀಲ ಪಾಟೀಲ, ಉಪಕಾರ್ಯಾಧ್ಯಕ್ಷ ಪಪ್ಪು ಪಾಟೀಲ, ಕಾರ್ಯದರ್ಶಿ ಸಮೀರ ಬಾಗೇವಾಡಿ, ಸಂಚಾಲಕ ಹರಿಶ್ಚಂದ್ರ ಶಾಂಡಗೆ, ಸಂಜಯ ಮೊಳವಾಡೆ, ಆನಂದ ಗಿಂಡೆ, ಶೇಖರ ಪಾಟೀಲ, ಡಿಪ್ಲೋಮಾ ಪ್ರಾಚಾರ್ಯ ಬಸವರಾಜ ಕರೋಶಿ, ಕಾರ್ಯಕ್ರಮ ಸಂಯೋಕ ಪ್ರೊ. ಅಕ್ಷಯ ಯಾದವಾಡ, ಎಲ್ಲ ವಿಭಾಗದ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೊ. ಗಾಯತ್ರಿ ಬನ್ನೆ ಪ್ರಾರ್ಥನಾಗೀತೆ ಹಾಡಿದರು. ಡಾ. ವೀರೇಶ ಮಠದ ಸ್ವಾಗತಿಸಿದರು. ಪ್ರೊ. ರೀನಾ ಖಡಬಡಿ ಅತಿಥಿಗಳನ್ನು ಪರಿಚಯಿಸಿದರು. ಪ್ರೊ. ಕವಿತಾ ವಸೇದಾರ ಮತ್ತು ಪ್ರೊ. ಮಾಧವಿ ಅವಳೇಕರ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ಅನುಪ ಗಂಜಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-21-1793473840

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.