ಶನಿವಾರ, ಜನವರಿ 29, 2022
17 °C

ಬೆಂಗಳೂರು ಉತ್ತರ ವಿವಿ ಕುಲಪತಿಯಾಗಿ ನಿರಂಜನ ವಾನಳ್ಳಿ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ನಿರಂಜನ ವಾನಳ್ಳಿ ಅವರು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕಗೊಂಡಿದ್ದಾರೆ.

ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆಗಿರುವ ಥಾವರಚಂದ್‌ ಗೆಹಲೋತ್‌ ಅವರು ಮಂಗಳವಾರ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಅವರು ಮುಂದಿನ ನಾಲ್ಕು ವರ್ಷ ಅಥವಾ 67 ವರ್ಷ ವಯೋಮಿತಿ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೂ ಈ ಹುದ್ದೆಯಲ್ಲಿ ಇರಲಿದ್ದಾರೆ.

ಪ್ರೊ.ಟಿ.ಡಿ.ಕೆಂಪರಾಜು ಅವರು ವಿಶ್ವವಿದ್ಯಾಲಯದ ಮೊದಲ ಕುಲಪತಿಯಾಗಿ 2017ರಲ್ಲಿ ಅಧಿಕಾರ ಸ್ವೀಕರಿಸಿದ್ದರು. 2021ರ ಜುಲೈನಲ್ಲಿ ಅವರ ಅಧಿಕಾರಾವಧಿ ಪೂರ್ಣಗೊಂಡಿತ್ತು. ಬಳಿಕ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ.ಡಿ.ಕುಮುದಾ ಅವರನ್ನು ಹಂಗಾಮಿ ಕುಲಪತಿಯನ್ನಾಗಿ ನೇಮಿಸಲಾಗಿತ್ತು.

ಉತ್ತರ ಕನ್ನಡ ಜಿಲ್ಲೆಯ ವಾನಳ್ಳಿಯಲ್ಲಿ ಜನಿಸಿದ ನಿರಂಜನ ಅವರು 30ಕ್ಕೂ ಹೆಚ್ಚು ಕೃತಿಗಳನ್ನೂ ಬರೆದಿದ್ದಾರೆ. ‘ಸುದ್ದಿಯಷ್ಟೇ ಅಲ್ಲ’, ‘ಪ್ರೀತಿಗೆಷ್ಟು ಮುಖಗಳು’, ‘ಮೊಗೆದಷ್ಟೂ ನೆನಪುಗಳು’, ‘ಹುಡುಕಾಟದ ಹೊತ್ತು’, ‘ಒಮಾನ್‌ ಎಂಬ ಒಗಟು’, ‘ಎಲ್ಲರಿಗೂ ಬೇಕು ಸಂವಹನ ಕೌಶಲ’, ‘ಚೌ ಚೌ ಬಾತ್‌’ ಇವರು ಬರೆದಿರುವ ಪ್ರಮುಖ ಪುಸ್ತಕಗಳಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು