ತೆಕ್ಕಲಕೋಟೆ (ಬಳ್ಳಾರಿ ಜಿಲ್ಲೆ): ನಿಟ್ಟೂರು ಗ್ರಾಮದ ಸುಕ್ರದಪ್ಪನ ಬೆಟ್ಟದ ಬಳಿ ಹೊಲದಲ್ಲಿ ಬಂಡೆಗಲ್ಲು ಶಾಸನ ಪತ್ತೆಯಾಗಿದೆ.

ನಿಟ್ಟೂರಿನಲ್ಲಿರುವ ಅಶೋಕನ ಶಿಲಾಶಾಸನ ಪತ್ತೆಯಾಗಿರುವ ಸ್ಥಳದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿರುವ ಈ ಬಂಡೆಗಲ್ಲು ಶಾಸನವನ್ನು ಸಂಶೋಧನಾರ್ಥಿಗಳಾದ ಅಶೋಕ್ ಅಬಕಾರಿ, ಮನೋಹರ ಸಿ.ಎಂ ಗುರುತಿಸಿ, ಕ್ಷೇತ್ರ ಅಧ್ಯಯನಕ್ಕೆ ಧಾರವಾಡದ ಲಿಪಿತಜ್ಞ ಮಾರುತಿ ಭಜಂತ್ರಿ ಹಾಗೂ ಹಿರೇಬೆಣಕಲ್ ಮಂಜುನಾಥ ದೊಡ್ಡಮನಿ ಅವರ ಗಮನಕ್ಕೆ ತಂದರು.

ಶಾಸನವು ಬಂಡೆಯೊಂದರ ಮೇಲೆ ಪ್ರಾಚೀನ ಲಿಪಿಯಲ್ಲಿ ಬರೆಯಲ್ಪಟ್ಟಿದ್ದು, ಏಳು ಸಾಲುಗಳಿವೆ. ಮೌರ್ಯರ ಆಳ್ವಿಕೆಯನ್ನು ಒಳಗೊಂಡಿರುವ ಪ್ರದೇಶವೆಂದು ಗುರುತಿಸಲಾಗಿತ್ತು. ಸದ್ಯ ಪತ್ತೆಯಾದ ಶಾಸನದ ಲಿಪಿಯ ಆಧಾರದ ಮೇಲೆ ಇದು ಏಳನೇ ಶತಮಾನ ಬಾದಾಮಿ ಚಾಲುಕ್ಯರ ಕಾಲದಿಂದ ರಾಷ್ಟ್ರಕೂಟರ ಕಾಲಘಟ್ಟಕ್ಕೆ ಸೇರಿದ್ದು ಎಂದು ಅಂದಾಜಿಸಲಾಗಿದೆ.

‘ಇತಿಹಾಸ ಸಂಶೋಧಕ ಗಂಗಾವತಿಯ ಶರಣಬಸಪ್ಪ ಕೋಲ್ಕರ ಮಾರ್ಗದರ್ಶನದಲ್ಲಿ ಶಾಸನದ ಅಧ್ಯಯನ ನಡೆಸುತ್ತಿದ್ದು, ಶಾಸನದ ಕುರಿತು ಶೀಘ್ರವೇ ಮಾಹಿತಿ ಒದಗಿಸಲಾಗುವುದು’ ಎಂದು ಲಿಪಿತಜ್ಞ ಮಾರುತಿ ಭಜಂತ್ರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-1524792715

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.