ತರೀಕೆರೆ: ‘ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ, ಬೆಂಗಳೂರಿನ ನೊಳಂಬ ಸಮಾಜ ಹಾಗೂ ಅಜ್ಜಂಪುರದ ಶ್ರೀಗುರು ಸಿದ್ದರಾಮೇಶ್ವರ ಸಮುದಾಯ ಭವನ ಉಪ ಸಮಿತಿ ವತಿಯಿಂದ ಮೇ 31ರಂದು ಜಿಲ್ಲಾ ಮಟ್ಟದ 12ನೇ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅಜ್ಜಂಪುರದ ಶ್ರೀಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಮುಖಂಡ ಎಸ್.ಎಂ. ನಾಗರಾಜ ತಿಳಿಸಿದರು.

ಪಟ್ಟಣದ ಶ್ರೀಗುರು ಸಿದ್ದರಾಮೇಶ್ವರ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಗುರುವಾರ ನಡೆದ ಸಮಾಜದ ಮುಖಂಡರೊಂದಿಗೆ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಅರ್ಹ ವಿದ್ಯಾರ್ಥಿಗಳು ಮೇ 23ರೊಳಗೆ ವ್ಯವಸ್ಥಾಪಕರು, ಶ್ರೀಗುರು ಸಿದ್ದರಾಮೇಶ್ವರ ಸಮುದಾಯ ಭವನ, ಅಜ್ಜಂಪುರ ಈ ವಿಳಾಸಕ್ಕೆ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಇದೇ ವೇಳೆ, ನೊಳಂಬ ಸಮಾಜದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾಭ್ಯಾಸಕ್ಕಾಗಿ ವಿಶೇಷ ಆರ್ಥಿಕ ನೆರವು ಸಹ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗೆ 72599 15368 ಅಥವಾ 93535 69036 ಅನ್ನು ಸಂಪರ್ಕಿಸಬಹುದು ಎಂದರು.

ಮಹೇಶ್ವರಪ್ಪ, ಶೇಖರಪ್ಪ, ಮಲ್ಲೇಶಪ್ಪ, ಮೋಹನ್, ಶಾರದ ವೇಲು ಮುರುಗನ್, ಸಮುದಾಯ ಭವನದ ವ್ಯವಸ್ಥಾಪಕ ಅಜಯ್, ಬ್ಯಾಂಕ್ ವ್ಯವಸ್ಥಾ ಪಕ ಅರುಣ್ ಕುಮಾರ್, ಶಿವಕುಮಾರ್, ಸಂತೋಷ್, ವಿನಯ್ ಡಿ. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-126-1272051044

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.