ಕುರುಗೋಡು: ‘ವಿದ್ಯಾರ್ಥಿಗಳಲ್ಲಿನಾಯಕತ್ವದ ಗುಣ ಬೆಳವಣಿಗೆಗೆ ಎನ್ಎಸ್ಎಸ್ (ರಾಷ್ಟ್ರೀಯ ಸೇವಾ ಯೋಜನೆ) ಶಿಬಿರ ಉತ್ತಮ ವೇದಿಕೆಯಾಗಿದೆ’ ಎಂದು ಪ್ರಾಚಾರ್ಯೆ ಶಾಂತಲಾ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಯಲ್ಲಾಪುರ ಗ್ರಾಮದಲ್ಲಿ ಕುರುಗೋಡು ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿರುವ ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ಶಿಕ್ಷಣದ ಜತೆಗೆ ಮಾನಸಿನ ಮತ್ತುದೈಹಿಕ ಬೆಳವಣಿಗೆ, ಸೇವಾ ಮನೋಭಾವ, ಸಹಕಾರಿ ತತ್ವ ಮೈಗೂಡಿಸಿಕೊಳ್ಳಲು ವಿದ್ಯಾರ್ಥಿಗಳು ಎನ್ಎಸ್ಎಸ್ ಶಿಬಿರದಲ್ಲಿ ಭಾಗವಹಿಸಬೇಕು’ ಎಂದು ಸಲಹೆ ನೀಡಿದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪ್ರಕಾಶ್ ಮಾತನಾಡಿ, ‘ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಪರಿಸರದ ಪರಿಚಯವಾಗಬೇಕಾದರೆ ಎನ್ಎಸ್ಎಸ್ ಶಿಬಿರದಲ್ಲಿ ಭಾಗವಹಿಸಬೇಕು’ ಎಂದರು.

ಏ.29ರವರೆಗೆ ಜರುಗುವ ಶಿಬಿರದಲ್ಲಿಪರಿಸರ ಸಂರಕ್ಷಣೆ, ಸಸಿ ನೆಡುವ ಕಾರ್ಯ ಕ್ರಮ, ಜಾಗೃತಿ ಜಾಥಾ, ಆರೋಗ್ಯ ತಪಾಸಣೆ ಶಿಬಿರ, ರಕ್ತದಾನದ ಮಹತ್ವ, ಏಡ್ಸ್ ಜಾಗೃತಿ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತವೆ.

ಕಾಲೇಜು ಗುಣಮಟ್ಟಕೋಶ ಸಂಚಾಲಕ ಚನ್ನಬಸಯ್ಯ, ಶಿಬಿರದ ಸಂಚಾಲಕರಾದ ಶಶಿಕಾಂತ್, ಮುರಳಿಶಂಕರ ಗೌಡ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ತುಕಾರಾಮ್ ಗೊರವ, ಅಂಜಿನಪ್ಪ, ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-25-1568039083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.