ನ್ಯಾಮತಿ: ಖಾಸಗಿ ಸಂಸ್ಥೆಯವರು ತಮ್ಮ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಸೆಳೆಯಲು ವಿವಿಧ ಮಾರ್ಗಗಳನ್ನು ಅನುಸರಿಸುತ್ತಾರೆ. ಆದರೆ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ (ಕೆಪಿಎಸ್) ಪ್ರೌಢಶಾಲೆ ವಿಭಾಗದ ಎಸ್ಡಿಎಂಸಿ ಸದಸ್ಯರು ಕಸ ಸಂಗ್ರಹ ವಾಹನ ಬಳಸಿಕೊಂಡು ವಿನೂತನ ಪ್ರಯೋಗ ನಡೆಸಿದ್ದಾರೆ.

ಕೆಪಿಎಸ್ ಪ್ರೌಢಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ, ಉತ್ತಮ ಶಿಕ್ಷಕರು, ಕ್ರೀಡಾಂಗಣ ಸೇರಿದಂತೆ ವಿವಿಧ ಸೌಲಭ್ಯಗಳಿವೆ. ಇವು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರಲಿವೆ ಎಂದು ಕಸ ಸಂಗ್ರಹಿಸುವ ವಾಹನದಲ್ಲಿ ಆಡಿಯೊ ಪ್ರಸಾರ ಮಾಡಿ ಪ್ರಚಾರ ಮಾಡಲಾಗುತ್ತಿದೆ.

ವಾಹನದಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಗೀತೆಯ ಜೊತೆಗೆ ಕೆಪಿಎಸ್ ಶಾಲೆಯ ಸೌಲಭ್ಯ, ಮಹತ್ವ ಸಾರುತ್ತಿರುವುದು ಸಾರ್ವಜನಿಕರ ಗಮನ ಸೆಳೆಯುತ್ತಿದೆ.

‘ಶಿಕ್ಷಣ ಇಲಾಖೆ ಕೊಟ್ಟಿರುವ ಆಡಿಯೊ ಬಳಸಿಕೊಂಡು ಪ್ರಚಾರ ಮಾಡುತ್ತಿದ್ದೇವೆ. ಇದರಿಂದ ಪೋಷಕರಿಗೆ ಬೇಗನೆ ಮಾಹಿತಿ ಸಿಗುತ್ತದೆ. ಈ ಕಾರ್ಯಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿ ಸಾಥ್ ನೀಡಿದ್ದಾರೆ ’ಎಂದು ಎಸ್ಡಿಎಂಸಿ ಕಾರ್ಯಾಧ್ಯಕ್ಷ ಎಂ.ಕರಿಬಸಪ್ಪ, ಉಪಾಧ್ಯಕ್ಷ ಮಧುರಾಜ, ಸದಸ್ಯ ಮಂಜುನಾಥ, ಪ್ರಭಾರ ಕಂದಾಯ ಅಧಿಕಾರಿ ಮನು ಆಚಾರ್ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-43-50772348

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.