ಪಡುಬಿದ್ರಿ: ಪುಟಾಣಿಗಳಿಗೆ ಬಲೂನ್ ನೀಡಿ, ಹೂಮಳೆ ಸುರಿಸುವ ಮೂಲಕ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಶಾಲಾರಂಭ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಾಂಶುಪಾಲೆ ಸುಮಾ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಪೋಷಕರು ಶಾಸಕರನ್ನು ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ಅವರೊಂದಿಗೆ ಶಾಸಕರು ಪುಟಾಣಿ ಮಕ್ಕಳಿಗೆ ಬಲೂನ್ ನೀಡಿ, ಹೂಮಳೆ ಸುರಿಸಿ ಶಾಲೆಗೆ ಬರಮಾಡಿಕೊಂಡರು.

ಶಾಲೆಯನ್ನು ತೋರಣಗಳಿಂದ ಶೃಂಗರಿಸಲಾಗಿತ್ತು. ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ವಸಂತ್, ನಾಮನಿರ್ದೇಶಿತ ಸದಸ್ಯ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪದನಿಮಿತ್ತ ಸದಸ್ಯ ಹೇಮಚಂದ್ರ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣ ಬಂಗೇರಾ, ಪ್ರೌಢಶಾಲಾ ವಿಭಾಗದ ಮುಖ್ಯಸ್ಥೆ ಸರಿತಾ ಡಿಸೋಜ, ಪ್ರಾಥಮಿಕ ವಿಭಾಗದ ಶೈಲಜಾ, ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಕರ್ಕೇರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-28-1504047855

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.