ಬೆಂಗಳೂ: ‘ಪ್ಯಾನ್ ಐಐಟಿ ಅಲ್ಯೂಮ್ನಿ ಇಂಡಿಯಾ ಅಸೋಸಿಯೇಷನ್ ಮತ್ತು ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ‘ಪ್ಯಾನ್-ಐಐಟಿ ಬೆಂಗಳೂರು ಶೃಂಗಸಭೆ– 2026’ ಮೇ 16ರಂದು ನಡೆಯಲಿದೆ’ ಎಂದು ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಂತ್ರಜ್ಞಾನದಲ್ಲಿನ ಸ್ವಾಯತ್ತತೆ’ ಎಂಬ ವಿಷಯದಡಿ ಈ ಶೃಂಗಸಭೆ ನಡೆಯಲಿದೆ. 23 ಐಐಟಿಗಳ 5 ಲಕ್ಷಕ್ಕೂ ಹೆಚ್ಚು ಅಲ್ಯೂಮ್ನಿಗಳ ಸಂಯುಕ್ತ ಚಿಂತನೆಯ ಫಲ ಈ ಶೃಂಗ ಸಭೆ’ ಎಂದರು.

‘ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ, ವ್ಯವಹಾರ ಮತ್ತು ನೀತಿ ರೂಪಣೆಯಲ್ಲಿ ಸಕ್ರಿಯವಾಗಿರುವ ಸಮುದಾಯವನ್ನು ಒಂದೇ ವೇದಿಕೆಗೆ ತರುವುದು ಸಭೆಯ ಉದ್ದೇಶ’ ಎಂದು ಅವರು ಹೇಳಿದರು.

‘ಸಾರ್ವಜನಿಕ ವಲಯ ಮತ್ತು ತಾಂತ್ರಿಕ ಕಂಪನಿಗಳ ಮೂಲಕ ಏರೋಸ್ಪೇಸ್, ರಕ್ಷಣಾ ಹಾಗೂ ಮೂಲ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿಕರ್ನಾಟಕವು ಗಟ್ಟಿಯಾದ ನೆಲೆ ಹೊಂದಿದೆ. ಈ ಹಂತದಲ್ಲಿ ಅಕಾಡೆಮಿ, ಕೈಗಾರಿಕೆ ಮತ್ತು ಸರ್ಕಾರ ಗಳ ನಡುವೆ ಪರಸ್ಪರ ಸಹಕಾರ ಅಗತ್ಯವಾಗಿದ್ದು, ಈ ಕಾರಣಕ್ಕೆ ಈ ಶೃಂಗ ಸಭೆ ಹಮ್ಮಿಕೊಳ್ಳಲಾಗಿದೆ’ ಎಂದು ವಿವರಿಸಿದರು. ಪ್ಯಾನ್ ಐಐಟಿ ಅಧ್ಯಕ್ಷ ಪ್ರಭಾತ್ ಕುಮಾರ್ ಮಾತನಾಡಿ, ‘ಈ ಶೃಂಗ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆಗಳು ಹಾಗೂ ಎಐ, ರಕ್ಷಣೆ, ಸೆಮಿಕಂಡಕ್ಟರ್, ಇಂಧನ, ಮೊಬೈಲಿಟಿ ಮತ್ತು ಆರೋಗ್ಯ ಕ್ಷೇತ್ರಗಳ ಕುರಿತು ಸಂವಾದ ನಡೆಯಲಿದೆ’ ಎಂದರು.

ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ ಗುರೂಜಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಇಂಧನ) ಗೌರವ್ ಗುಪ್ತಾ ಮತ್ತಿತರರು ಭಾಗವಹಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-51-1075606656

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.