ಪಟ್ಟದಕಲ್ಲು (ಬಾದಾಮಿ): ‘ಚಾಲುಕ್ಯ ಸಾಮ್ರಾಜ್ಯದ ದೊರೆಗಳು 15 ಶತಮಾನಗಳ ಹಿಂದೆಯೇ ವಿಶ್ವಕ್ಕೆ ಸಾಂಸ್ಕೃತಿಕ ಹಿರಿಮೆ ಸಾರುವ ಸ್ಮಾರಕಗಳನ್ನು ಬಿಟ್ಟು ಹೋಗಿದ್ದಾರೆ. ಮುಂದಿನ ಪೀಳಿಗೆಗೆ ನಮ್ಮ ಪೂರ್ವಜರ ಸ್ಮಾರಕಗಳನ್ನು ಸಂರಕ್ಷಿಸಿ ನೀಡಬೇಕು. ವಿದ್ಯಾರ್ಥಿಗಳು ಇತಿಹಾಸ ಅಧ್ಯಯನ ಮಾಡಿ’ ಎಂದು ಕರ್ನಾಟಕ ವಿಶ್ವ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಶ್ರೀನಿವಾಸ ಪಾಡಿಗಾರ ಹೇಳಿದರು.

ಧಾರವಾಡ ವಲಯದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಎಸ್.ಬಿ.ಮಮದಾಪೂರ ಪದವಿ ಕಾಲೇಜ್ ಮತ್ತು ಭಾರತೀಯ ಇತಿಹಾಸ ಸಂಕಲನ ಸಮಿತಿ ಆಶ್ರಯದಲ್ಲಿ ಶನಿವಾರ ಪಟ್ಟದಕಲ್ಲು ದೇವಾಲಯದ ಆವರಣದಲ್ಲಿ ನಡೆದ ವಿಶ್ವ ಪರಂಪರೆ ದಿನಾಚರಣೆ ಅಂಗವಾಗಿ ‘ಪಟ್ಟದಕಲ್ಲು ವಾಸ್ತುಶಿಲ್ಪದ ಮಹತ್ವ‘ ಕುರಿತು ಕಾರ್ಯಾಗಾರದಲ್ಲಿ ಮಾತನಾಡಿದರು.

ಅತಿಥಿಯಾಗಿ ಭಾರತೀಯ ಇತಿಹಾಸ ಸಂಕಲನ ಸಮಿತಿ ಸಂಶೋಧನಾ ಮುಖ್ಯಸ್ಥ ಬಸವರಾಜ ಅಕ್ಕಿ ಪಟ್ಟದಕಲ್ಲು ವಾಸ್ತುಶಿಲ್ಪ ಮಹತ್ವ ಕುರಿತು ತಿಳಿಸಿದರು.

ಎಸ್.ಬಿ.ಮಮದಾಪೂರ ಪದವಿ ಕಾಲೇಜಿನ ಪ್ರಾಧ್ಯಾಪಕ ಮುಕುಂದರ ದೊಡ್ಡಮನೆ, ನಿವೃತ್ತ ಮುಖ್ಯ ಶಿಕ್ಷಕ ಎಂ.ಎಸ್.ಅಕ್ಕಿ ಸ್ಮಾರಕಗಳ ಮಹತ್ವ ಕುರಿತು ಹೇಳಿದರು.

ಧಾರವಾಡ ವಲಯದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧೀಕ್ಷಕ ರಮೇಶ ಮೂಲಿಮನಿ ಅಧ್ಯಕ್ಷತೆ ವಹಿಸಿ ಚಾಲುಕ್ಯರ ಗತವೈಭವದ ಸಾಮ್ರಾಜ್ಯದ ಇತಿಹಾಸದ ಮಹತ್ವ ಬಗ್ಗೆ ತಿಳಿಸಿದರು.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಹಾಯಕ ಪುರಾತತ್ವ ಅಧೀಕ್ಷಕರಾದ ಶ್ರೀಗುರು ಪಾಗಿ, ಪ್ರಸನ್ನ, ಸ್ಥಳೀಯ ಎ.ಎಸ್.ಐ ಅಧಿಕಾರಿ ಅನಿರುದ್ಧ ದೇಸಾಯಿ ವೇದಿಕೆಯಲ್ಲಿ ಇದ್ದರು.

ಬಾದಾಮಿ ಮತ್ತು ಮುಧೋಳ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-19-1466041677

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.