ಪಟ್ಟನಾಯಕನಹಳ್ಳಿ (ಶಿರಾ): ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಹಳೆ ನೆನಪುಗಳನ್ನು ಜೀವಂತಗೊಳಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ಪ್ರೇರಣೆಯಾಗುತ್ತದೆ ಎಂದು ನಿವೃತ್ತ ಶಿಕ್ಷಕ ಎಲ್.ಜಿ.ದಿಬ್ಬಯ್ಯ ಹೇಳಿದರು.

ತಾಲ್ಲೂಕಿನ ಪಟ್ಟನಾಯಕನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 2007-08ನೇ ಎಸ್ಎಸ್ಎಲ್ಸಿ ಸಾಲಿನ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ತಾನು ಕಲಿತ ಶಾಲೆ ಅಭಿವೃದ್ಧಿಗೆ ಸಹಕಾರ ನೀಡಿ ಕೃತಜ್ಞತಾ ಮನೋಭಾವ ಮೆರೆಯಬೇಕು ಎಂದರು.

ಹಳೆಯ ವಿದ್ಯಾರ್ಥಿ ಕೀರ್ತಿ ಗೌಡ ಮಾತನಾಡಿ, ಶಾಲೆಯಿಂದ ಕಲಿತ ಶಿಕ್ಷಣ ಮತ್ತು ಮೌಲ್ಯ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಶಿಕ್ಷಕರಾದ ನರಸಿಂಹಯ್ಯ, ಇಂದಿರಮ್ಮ, ದಿವ್ಯ, ಸವಿತ, ಬಸವರಾಜು, ಜಯರಾಮು ಮತ್ತು ಹಳೆಯ ವಿದ್ಯಾರ್ಥಿಗಳಾದ ಶ್ರೀನಿವಾಸ್, ಫರೀದಾ, ಮಾರುತಿ, ವಸಂತ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-17-2000363201

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.