ಪಾವಗಡ: ಹಸಿರು ಕ್ರಾಂತಿಯ ಹರಿಕಾರರಾಗಿ, ದೇಶದ ಉಪಪ್ರಧಾನಿಯಾಗಿ ಬಾಬು ಜಗಜೀವರಾಂ ಸೇವೆ ಸ್ಮರಣೀಯ ಎಂದು ತಹಶೀಲ್ದಾರ್ ವೈ. ರವಿ ತಿಳಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಭಾನುವಾರ ನಡೆದ ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಗಜೀವನರಾಂ ದೇಶದ ದಮನಿತರಿಗಾಗಿ, ಸಮಾನತೆಗಾಗಿ ಶ್ರಮಿಸಿದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅವರು ಸಮಾಜ ಸುಧಾರಕರಾಗಿ ದೇಶಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ ಎಂದರು.

ಬಿಆರ್ಸಿಜಿ ವೆಂಕಟೇಶ್, ಜಗಜೀವನ್ ರಾಂ ಕೇವಲ ರಾಜಕಾರಣಿಯಾಗಿರಲಿಲ್ಲ, ಜವಾಹರಲಾಲ್ ನೆಹರೂ ಅವರ ಮೊದಲ ಸಂಪುಟದ ಸದಸ್ಯರಾಗಿದ್ದ ಅವರು ಅತ್ಯಂತ ಕಿರಿಯ ಸಚಿವರಾಗಿದ್ದರು. ಸಂವಿಧಾನ ಸಭೆಯ ಸದಸ್ಯರಾಗಿದ್ದರು. ಸಾಮಾಜಿಕ ನ್ಯಾಯದ ತತ್ವಗಳಿಗಾಗಿ ಶ್ರಮಿಸಿದ ಮಹನೀಯರ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕುಮಾರ್, ನಾಗರಾಜು, ಅಧಿಕಾರಿಗಳು, ಇಸಿಒ ವೇಣುಗೋಪಾಲ್, ಕಂದಾಯ ನಿರೀಕ್ಷಕ ರಾಜಗೋಪಾಲ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-17-755367914

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.