ಪಿರಿಯಾಪಟ್ಟಣ: ‘ಯಾವುದೇ ರೀತಿಯ ಸೇವಾ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಂಡಲ್ಲಿ ಮಾತ್ರ ಜನರನ್ನು ತಲುಪಲು ಸಾಧ್ಯವಿದೆ’ ಎಂದು ರೋಟರಿ ಜಿಲ್ಲಾ ಗವರ್ನರ್ ಪಿ.ಕೆ.ರಾಮಕೃಷ್ಣ ಅಭಿಪ್ರಾಯಪಟ್ಟರು.

ರೋಟರಿ ಪಿರಿಯಾಪಟ್ಟಣ ಐಕಾನ್ಸ್ ಸಂಸ್ಥೆಗೆ ಅಧಿಕೃರ ಭೇಟಿ ನೀಡಿ ಮಾತನಾಡಿದರು. ಪರಿಸರ, ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರೋಟರಿ ಸಂಸ್ಥೆ ಛಾಪನ್ನು ಮೂಡಿಸಿದೆ ಎಂದರು. ಸಮಾಜದಲ್ಲಿ ಸೇವಾ ಚಟುವಟಿಕೆಗಳನ್ನು ಮಾಡಲು ಹಲವರಲ್ಲಿ ಆಸಕ್ತಿ ಮತ್ತು ಉತ್ಸಾಹವಿರುತ್ತದೆ ಅಂತಹವರನ್ನು ರೋಟರಿಯ ಕುಟುಂಬಕ್ಕೆ ಸೇರ್ಪಡೆಗೊಳಿಸಿ . ಸಾರ್ವಜನಿಕರಿಗೆ ನೆಮ್ಮದಿಯ ಜೀವನ ಕಲ್ಪಿಸಬೇಕು . ಇತರರಿಗೆ ಮಾದರಿಯಾಗಿರಬೇಕು ಎಂದರು.

ನಗರ ಪ್ರದೇಶಗಳಲ್ಲಿ ರೋಟರಿಯ ಸೇವಾ ಚಟುವಟಿಕೆಗಳಿಗೆ ಕಾರ್ಪೊರೇಟ್ ಸಂಸ್ಥೆಗಳ ಸಿಎಸ್ಆರ್ ನಿಧಿ ಉಪಯೋಗವಾಗುತ್ತಿದೆ, ಗ್ರಾಮೀಣ ಪ್ರದೇಶಗಳಿಗೂ ಇದು ತಲುಪುವಂತೆ ಮಾಡುವುದು ರೋಟರಿಯ ಕರ್ತವ್ಯವಾಗಬೇಕು ಎಂದರು. ರೋಟರಿ ಸದಸ್ಯತ್ವವನ್ನು ಮತ್ತಷ್ಟು ವಿಸ್ತರಿಸಬೇಕಿದೆ ಎಂದರು.

ರೋಟರಿ ವಲಯ 6ರ ಸಹಾಯಕ ಪ್ರಾಂತಪಾಲ ರಾಜೇಗೌಡ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಶುದ್ಧ ಕುಡಿಯುವ ನೀರಿನ ಬಳಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು. ಗ್ರಾಮೀಣ ಪ್ರದೇಶಗಳ ಅಂಗನವಾಡಿ ಕೇಂದ್ರಗಳು ಮತ್ತು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಮೂಲ ಸೌಕರ್ಯಗಳ ಕೊರತೆಯಾಗದಂತೆ ಜಾಗ್ರತೆ ವಹಿಸಬೇಕಿದೆ ಎಂದರು.

ಝೋನಲ್ ಲೆಫ್ಟಿನೆಂಟ್ ಕೆ.ರಮೇಶ್ ಮಾತನಾಡಿ ರೋಟರಿ ಸೇವಾ ಚಟುವಟಿಕೆಗಳು ಸಂತೃಪ್ತ ಮನೋಭಾವವನ್ನು ಮೂಡಿಸುತ್ತದೆ ಎಂದರು.

ಐಕಾನ್ಸ್ ಸಂಸ್ಥೆ ಗೆ ಐವರು ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು. ಸರ್ಕಾರಿ ಶಾಲೆಯ ಸಾಧಕ ವಿದ್ಯಾರ್ಥಿಗಳು ಹಾಗೂ ರೋಟರಿ ಸದಸ್ಯರ ಮಕ್ಕಳನ್ನು ಪುರಸ್ಕರಿಸಲಾಯಿತು.

ರೋಟರಿ ಪಿರಿಯಾಪಟ್ಟಣ ಐಕಾನ್ಸ್ ಅಧ್ಯಕ್ಷ ಎಂ.ಬಿ.ಸಂಪತ್, ಕಾರ್ಯದರ್ಶಿ ಬಿ.ಎಸ್.ಸತೀಶ್ ಆರಾಧ್ಯ, ನಿಯೋಜಿತ ಅಧ್ಯಕ್ಷ ಟಿ.ಎಸ್.ಹರೀಶ್, ನಿಯೋಜಿತ ಕಾರ್ಯದರ್ಶಿ ಕೆ.ಡಿ. ಸಂದೀಪ್ ಪದಾಧಿಕಾರಿಗಳಾದ ಜೆ.ಎಸ್.ನಾಗರಾಜ್, ಸಿ.ಎನ್.ವಿಜಯ್, ಬಿ.ಆರ್.ಗಣೇಶ್, ಬಿ.ಎಸ್.ಪ್ರಸನ್ನ ಕುಮಾರ್, ಎಸ್.ರಮೇಶ್, ಡಿ.ಆರ್.ಧನಂಜಯ್, ಬಿ.ವಿ.ಅನಿತಾ, ಪ್ರೀತಿ ಅರಸ್, ಹೆಚ್.ಆರ್.ರಮ್ಯ, ಕೆ.ವಿ.ಶಿಲ್ಪ, ನಾಗ ನಾಯಕ, ವಿ.ಎಸ್.ರಮೇಶ್, ಪರಮೇಶ್. ಡಿ.ರಮೇಶ್, ನಾಗರಾಜ್, ಕುಮಾರ್, ಆನಂದ್, ಕಾಳೆಗೌಡ, ಶ್ರೀನಿವಾಸ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-38-2115590342

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.