ಪಿರಿಯಾಪಟ್ಟಣ: ವಿದ್ಯಾರ್ಥಿಗಳ ಕ್ರಿಯಾಶೀಲತೆ ಗುರುತಿಸಲು ಬೇಸಿಗೆ ಶಿಬಿರಗಳು ಸಹಕಾರಿಯಾಗಲಿವೆ ಎಂದು ಮೈಲ್ಯಾಕ್ ಅಧ್ಯಕ್ಷ ಎಚ್.ಡಿ ಗಣೇಶ್ ತಿಳಿಸಿದರು.

ಪಟ್ಟಣದಲ್ಲಿ ನಕ್ಷತ್ರ ಡ್ಯಾನ್ಸ್ ಸ್ಕೂಲ್ ಏರ್ಪಡಿಸಲಾಗಿದ್ದ ಬೇಸಿಗೆ ಶಿಬಿರದ ಐದನೇ ವರ್ಷದ ಸಮಾರೋಪ ಸಮಾರಂಭ ‘ನಕ್ಷತ್ರೋತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆ ಜೊತೆಗೆ ವಿಶೇಷ ಆಸಕ್ತಿಕರ ವಿಷಯಗಳನ್ನು ತಿಳಿಯಲು ಬೇಸಿಗೆಶಿಬಿರಗಳು ಉತ್ತಮ ವೇದಿಕೆಯಾಗಿವೆ. ನಗರ ಪ್ರದೇಶಕ್ಕೆ ಸೀಮಿತವಾಗಿದ್ದ ಬೇಸಿಗೆ ಶಿಬಿರಗಳನ್ನು ಗ್ರಾಮಾಂತರ ಪ್ರದೇಶಕ್ಕೂ ವಿಸ್ತರಿಸಿ, ಐದು ವರ್ಷಗಳಿಂದ ಪಟ್ಟಣದಲ್ಲಿ ನಕ್ಷತ್ರ ಡ್ಯಾನ್ಸ್ ಸ್ಟುಡಿಯೊ ನಡೆಸುತ್ತಿರುವ ಬೇಸಿಗೆ ಶಿಬಿರದ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಭೌತಿಕ ಬೆಳವಣಿಗೆಗೆ ಸಹಕಾರಿಯಾಗಲಿವೆ ಎಂದರು. ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಈ. ಬಿ.ಲೋಕೇಶ್ ಮಾತನಾಡಿ, ಪೋಷಕರು ಪಠ್ಯದ ಜೊತೆಗೆ ತಮ್ಮ ಮಕ್ಕಳ ವಿಶೇಷ ಪ್ರತಿಭೆಗಳನ್ನು ಗುರುತಿಸಿ, ಇಂತಹ ಶಿಬಿರಗಳಿಗೆ ಸೇರಿಸುವುದರಿಂದ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದರು.

ನಕ್ಷತ್ರ ಡ್ಯಾನ್ಸ್ ಸ್ಟುಡಿಯೊ ಅಧ್ಯಕ್ಷರಾದ ಭವ್ಯಾ ಮಂಜುನಾಥ್ ಮಾತನಾಡಿ, ನೃತ್ಯ ಸಂಯೋಜಕ ಪ್ರಸನ್ನ ನೇತೃತ್ವದಲ್ಲಿ ಪಟ್ಟಣದಲ್ಲಿ ಡ್ಯಾನ್ಸ್ ಸ್ಟುಡಿಯೊ ಪ್ರಾರಂಭಿಸಿ ವಿದ್ಯಾರ್ಥಿಗಳಲ್ಲಿನ ನೃತ್ಯ ಸಂಗೀತ ಕಲೆ ಹಾಗೂ ಚಿತ್ರಕಲೆ ಸೇರಿದಂತೆ ವಿಶೇಷ ಗುಣಗಳನ್ನು ಪ್ರೋತ್ಸಾಹಿಸಿ, ಪ್ರತಿಭೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ಬಿಜಿಎಸ್ ಸಂಸ್ಥೆ ಆಡಳಿತಾಧಿಕಾರಿ ಸುಧಾಕರ್, ಮುಖ್ಯ ಶಿಕ್ಷಕ ಲಕ್ಕಣ್ಣ ಮಾತನಾಡಿದರು. ವಿದ್ಯಾರ್ಥಿಗಳು ನೃತ್ಯ ನಡೆಸಿಕೊಟ್ಟರು. ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಶಂಸನೀಯ ಪತ್ರ ವಿತರಿಸಲಾಯಿತು.

ಮುಖಂಡರಾದ ಕೃಷ್ಣಪ್ಪ, ಮುಕುಂದ, ನಕ್ಷತ್ರ ಡ್ಯಾನ್ಸ್ ಸ್ಟುಡಿಯೋ ನೃತ್ಯ ಸಂಯೋಜಕ ಪ್ರಸನ್ನ, ಶಿಕ್ಷಕರಾದ ವಾಸವಿ, ಪಲ್ಲವಿ, ನಿಶಾ, ಸತೀಶ್, ಪೃಥ್ವಿ, ವೇಣು, ಚಂದನ್, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-38-1297507350

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.