ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್‌ ಇಲಾಖೆ | PSI ನೇಮಕಾತಿ ಪರೀಕ್ಷೆ: ಪ್ರವೇಶ ಪತ್ರ ಬಿಡುಗಡೆ

Last Updated 28 ಸೆಪ್ಟೆಂಬರ್ 2021, 11:36 IST
ಅಕ್ಷರ ಗಾತ್ರ

ಕರ್ನಾಟಕ ಪೊಲೀಸ್ ಇಲಾಖೆಯು 545 ಸಿವಿಲ್ ಪೊಲೀಸ್ ಸಬ್‌-ಇನ್ಸ್‌ಪೆಕ್ಟರ್‌ (ಪಿಎಸ್‌ಐ) ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಇಲಾಖೆಯ ಅಧಿಕೃತ ವೆಬ್‌ಸೈಟ್‌ ’ಕೆಎಸ್‌ಪಿ’ಗೆ ಲಾಗಿನ್‌ ಆಗಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಬೆಂಗಳೂರು,ದಾವಣಗೆರೆ,ತುಮಕೂರು ಮಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ ಹಾಗೂ ಕಲಬುರ್ಗಿ ಜಿಲ್ಲಾ ಕೇಂದ್ರಗಳಲ್ಲಿಅಕ್ಟೋಬರ್ 3, (2021) ರಂದು ಪರೀಕ್ಷೆ ನಡೆಯಲಿದೆ.

ಪ್ರವೇಶ ಪತ್ರದೊಂದಿಗೆ ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಸರಿಯಾಗಿ ಪರೀಕ್ಷೆ ಕೇಂದ್ರಗಳಲ್ಲಿ ಹಾಜರಿರಲು ಇಲಾಖೆ ಸೂಚಿಸಿದೆ.

ಪರೀಕ್ಷೆ ದಿನ: 03–10–2021, ಭಾನುವಾರ

ಪತ್ರಿಕೆ-1: ಬೆಳಿಗ್ಗೆ 11 ರಿಂದ 12-30
ಪತ್ರಿಕೆ-2: ಮಧ್ಯಾಹ್ನ 3 ರಿಂದ 04-30

ಪರೀಕ್ಷೆ ಬರೆಯುವ ಅಭ್ಯರ್ಥಿಗಳುಪ್ರವೇಶ ಪತ್ರವನ್ನು ಈ ಕೆಳಗಿನ ವೆಬ್‌ಸೈಟ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ವೆಬ್‌ಸೈಟ್‌ ವಿಳಾಸ: http://psicivilnhk20.ksp-online.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT