ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಮ ಪ್ರಶ್ನೆಗೆ ತಜ್ಞರ ಉತ್ತರ: ಗಣಿತದಲ್ಲಿ ಸ್ನಾತಕೋತ್ತರ ಮುಂದೇನು?

Published 18 ಫೆಬ್ರುವರಿ 2024, 23:30 IST
Last Updated 18 ಫೆಬ್ರುವರಿ 2024, 23:30 IST
ಅಕ್ಷರ ಗಾತ್ರ

1. ನಾನು ಎಂ.ಎಸ್ಸಿ (ಗಣಿತ) ಮುಗಿಸಿದ್ದೇನೆ. ಶಿಕ್ಷಕ ವೃತ್ತಿಯಲ್ಲದೆ ಬೇರೆ ಯಾವ ವೃತ್ತಿಯ ಅವಕಾಶಗಳಿವೆ? ವೃತ್ತಿ ಸಂಬಂಧಿತ ಯಾವ ಕೋರ್ಸ್‌ಗಳನ್ನು ಮಾಡಬಹುದು?
ಹೆಸರು, ಊರು ತಿಳಿಸಿಲ್ಲ.

ಎಂ.ಎಸ್ಸಿ (ಗಣಿತ) ನಂತರ ಖಾಸಗಿ ಕ್ಷೇತ್ರದ ಬ್ಯಾಂಕಿಂಗ್, ಐಟಿ, ಕಂಪ್ಯೂಟಿಂಗ್, ಡೇಟಾಬೇಸ್ ಮ್ಯಾನೇಜ್‌ಮೆಂಟ್, ಅನಲಿಟಿಕ್ಸ್, ರಿಸರ್ಚ್, ಇನ್ವೆಸ್ಟ್ಮೆಂಟ್   ಕ್ಷೇತ್ರಗಳಲ್ಲಿ ಅವಕಾಶಗಳಿದ್ದು, ಇಲ್ಲಿನ ಪ್ರತಿಷ್ಠಿತ ಸಂಸ್ಥೆಗಳಲ್ಲಿ ನೀವು ಭವಿಷ್ಯವನ್ನು ರೂಪಿಸಿಕೊಳ್ಳಬಹುದು.

ಈ ಕ್ಷೇತ್ರಗಳಲ್ಲಿ, ಪ್ರತಿ ಉದ್ಯೋಗಿಗೆ ಅನ್ವಯವಾಗುವ ಉದ್ಯೋಗದ ವಿವರಗಳಿಗೆ (ಕರ್ತವ್ಯಗಳು, ಹೊಣೆಗಾರಿಕೆಗಳು, ಚಟುವಟಿಕೆಗಳು ಇತ್ಯಾದಿ) ಅನುಗುಣವಾಗಿ ಜ್ಞಾನ ಮತ್ತು ಕೌಶಲಗಳ ಅಗತ್ಯವಿರುತ್ತದೆ. ಹಾಗಾಗಿ, ವಿಷಯದ ಜ್ಞಾನ ಮತ್ತು ವೃತ್ತಿ ಸಂಬAಧಿತ ಕೌಶಲಗಳನ್ನು ನಿರಂತರವಾಗಿ ಪರಿಷ್ಕರಿಸುತ್ತಿರಬೇಕು. ಸಾಫ್ಟ್ ವೇರ್‌ ಕ್ಷೇತ್ರದಲ್ಲಿ ಆಸಕ್ತಿಯಿದ್ದರೆ, ಬೇಡಿಕೆಯಲ್ಲಿರುವ ಅರೆಕಾಲಿಕ ಕೋರ್ಸ್‌ಗಳಾದ ಮಷೀನ್ ಲರ್ನಿಂಗ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಪೈಥಾನ್, ಜಾವ, ಸಿ++, ಸ್ವಿಫ್ಟ್, ಲೈನಕ್ಸ್, ಡೇಟಾ ಸೈನ್ಸ್, ಸೈಬರ್ ಸೆಕ್ಯೂರಿಟಿ ಇತ್ಯಾದಿಗಳನ್ನು ಮಾಡಬಹುದು. ಹಾಗೂ, ಕೆಪಿಎಸ್‌ಸಿ/ಯುಪಿಎಸ್‌ಸಿ ಪರೀಕ್ಷೆಗಳ ಮೂಲಕ ಸರ್ಕಾರಿ ವಲಯದ ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಬಹುದು.

ಹಾಗಾಗಿ, ಎಂ.ಎಸ್ಸಿ (ಗಣಿತ) ನಂತರ ಅನೇಕ ಕ್ಷೇತ್ರಗಳಲ್ಲಿ ವೃತ್ತಿಯ ಅವಕಾಶಗಳಿವೆ. ಪ್ರಮುಖವಾಗಿ ನಿಮ್ಮ ಆಕಾಂಕ್ಷೆ, ಆಸಕ್ತಿ, ಅಭಿರುಚಿ, ಕೌಶಲಗಳ ಮೌಲ್ಯಮಾಪನ ಮಾಡಿ, ಯಾವ ವೃತ್ತಿ ನಿಮಗೆ ಸೂಕ್ತವೆಂದು ನಿರ್ಧರಿಸಿ. ಹೆಚ್ಚಿನ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT