ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾ.28ರಿಂದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿರುವ ಪಿಯು ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರು, 2020ನೇ ಸಾಲಿನ ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.

ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕ ಸಂಘವು ಭಾನುವಾರ ಸಭೆ ನಡೆಸಿ ಈ ನಿರ್ಣಯ ತೆಗೆದುಕೊಂಡಿದೆ.

‘ವಿವಿಧ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯಲು ನಾಲ್ಕು ಹಂತದ ಹೋರಾಟ ಮಾಡಿದ್ದೇವೆ. ಆದರೂ ಬೇಡಿಕೆಗಳು ಈಡೇರಿಲ್ಲ’ ಎಂದೂ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

ಬೇಡಿಕೆಗಳೇನು ?

* ಪದವಿಪೂರ್ವ ಕಾಲೇಜುಗಳ ವೇತನ ತಾರತಮ್ಯ ಸರಿಪಡಿಸುವ ಸಂಬಂಧ ಕುಮಾರ್ನಾಯಕ್ ಸಮಿತಿ ನೀಡಿದ್ದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು

* ₹500 ವಿಶೇಷ ಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸಬೇಕು

* ಕಾಲಮಿತಿ ಬಡ್ತಿಯನ್ನು ಮಂಜೂರು ಮಾಡಬೇಕು

* ನೆಟ್, ಸ್ಲೆಟ್, ಪಿಎಚ್.ಡಿ ವಿದ್ಯಾರ್ಹತೆ ಹೊಂದಿರುವ ಉಪನ್ಯಾಸಕರಿಗೆ ಪದವಿ ಕಾಲೇಜಿಗೆ ಬಡ್ತಿ ನೀಡಬೇಕು

* ಮೌಲ್ಯಮಾಪನ ಸಂಭಾವನೆಯನ್ನು ಕೆ–2 ಬದಲು, ಚೆಕ್ ಮೂಲಕ ವಿತರಿಸಬೇಕು

* ನೇರ ನೇಮಕಾತಿ ಮತ್ತು ಪದೋನ್ನತಿಯ ಮೂಲಕ ಶೀಘ್ರವೇ ಉಪನ್ಯಾಸಕರನ್ನು ಪ್ರಾಂಶುಪಾಲರನ್ನಾಗಿ ನೇಮಿಸಬೇಕು

* ಪ್ರತಿ ಉಪನ್ಯಾಸಕರಿಗೆ ವಾರದಲ್ಲಿ 16 ಗಂಟೆಗಳ ಬೋಧನಾ ಅವಧಿ ಮುಂದುವರಿಸಬೇಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.