ಪುತ್ತೂರು: ಮಾನ್ಯತೆ ಇರುವ ಕೋರ್ಸ್ಗಳನ್ನು ಉಳಿಸಿಕೊಂಡು ಉಪಯೋಗವಿಲ್ಲದ ಕೋರ್ಸ್ಗಳನ್ನು ಸರ್ಕಾರವೇ ನಿಷೇಧಿಸಲಿದ್ದು, ಮಾನ್ಯತೆ ಇಲ್ಲದ ಕೆಲವು ಕೋರ್ಸ್ಗಳು ರದ್ದಾಗಲಿವೆ. ಈ ಬಗ್ಗೆ ಪೋಷಕರು ಗಮನ ಹರಿಸಬೇಕಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ದ.ಕ ಜಿಲ್ಲಾ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪುತ್ತೂರು, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಸಹಯೋಗದಲ್ಲಿ ಎಸ್ಎಸ್ಎಲ್ಸಿಯಲ್ಲಿ ಶೇ 100 ಫಲಿತಾಂಶ ಪಡೆದ ಶಾಲೆಗಳು, ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ನಿವೃತ್ತ ಮುಖ್ಯ ಶಿಕ್ಷಕರಿಗೆ ಪುತ್ತೂರಿನ ಬಂಟರ ಭವನದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಾಣಿಜ್ಯ ಕಟ್ಟಡದ ಕೊಠಡಿಯಲ್ಲಿ ಶಿಕ್ಷಣ ಸಂಸ್ಥೆ ಪ್ರಾರಂಭವಾಗುತ್ತಿದೆ. ಶಿಕ್ಷಣ ವ್ಯವಸ್ಥೆ ಇಂದು ವಾಣಿಜ್ಯೀಕರಣವಾಗುತ್ತಿದೆ. ಮಕ್ಕಳು ಮಾರ್ಗದರ್ಶಕರ ಕೊರತೆಯಿಂದ ಹಿಂದುಳಿಯುತ್ತಿದ್ದಾರೆ. ಕಡಿಮೆ ಅಂಕ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಮೇಲೆತ್ತಬೇಕು. ಶೇ 100 ಫಲಿತಾಂಶ ದಾಖಲಿಸುವ ಜವಾಬ್ದಾರಿ ಎಲ್ಲ ಶಿಕ್ಷಣ ಸಂಸ್ಥೆಗಳ ಮೇಲಿದೆ. ಶಿಕ್ಷಕರು ಸಮಾಜ ಬದಲಾವಣೆ ಮಾಡುವವರಾಗಿದ್ದು, ಉದ್ಯೋಗದ ಜತೆಗೆ ಸಮಾಜಕ್ಕೂ ಕೊಡುಗೆ ನೀಡಬೇಕು ಎಂದರು.

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ. ಅಧ್ಯಕ್ಷತೆ ವಹಿಸಿದ್ದರು. ರಾಮಕೃಷ್ಣ ಪ್ರೌಢಶಾಲೆ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ಎಸ್ಎಸ್ಎಲ್ಸಿ ನೋಡೆಲ್ ಅಧಿಕಾರಿ ಹರಿಪ್ರಸಾದ್, ಕಡಬ ತಾಲ್ಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಾಂತರಾಮ ಓಡ್ಲ ಮಾತನಾಡಿದರು.

ಪುತ್ತೂರು ತಾಲ್ಲೂಕು ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ ಎಸ್.ಎ., ಪ್ರೌಢ ಶಾಲೆ ಮುಖ್ಯಶಿಕ್ಷಕರ ಸಂಘದ ಕಾರ್ಯದರ್ಶಿ ಜಯಲಕ್ಷ್ಮೀ ಇದ್ದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವಸಂತ ಮೂಲ್ಯ ಸ್ವಾಗತಿಸಿದರು. ಉಪಾಧ್ಯಕ್ಷ ಮೋನಪ್ಪ ವಂದಿಸಿದರು. ಕೆಯ್ಯೂರು ಕೆಪಿಎಸ್ನ ಸಹಶಿಕ್ಷಕ ವಿನೋದ್ ಕುಮಾರ್ ಕೆ.ಎಸ್. ನಿರೂಪಿಸಿದರು.

ನಿವೃತ್ತ ಮುಖ್ಯ ಶಿಕ್ಷಕರಾದ ಜಯಲಕ್ಷ್ಮೀ ಎ., ಜಯರಾಮ ಶೆಟ್ಟಿ, ನಳಿನಿ ಕೆ., ಶ್ರೀಧರ ಭಟ್, ರಮೇಶ್ ಮಯ್ಯ, ಶ್ರೀಪತಿ ಭಟ್, ಮೀರಾ ರಾಡ್ರಿಗಸ್ ಅವರನ್ನು ಸನ್ಮಾನಿಸಲಾಯಿತು.

2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳಿಸಿದ ಸರ್ಕಾರಿ ಪ್ರೌಢಶಾಲೆಯ ಶಿಲ್ಪ, ವಿಧಾತ್ರಿ, ಭಾನುಪ್ರೀಯ, ಸಪ್ನಾ, ಅನುದಾನಿತ ಶಾಲೆಯ ಯಶ್ವಿತಾ, ದೃತಿ, ಆದಿತ ಭಟ್, ದೀಪಾಕ್ಷಿ ಎಸ್., ಅನುದಾನ ರಹಿತ ಶಾಲೆಯ ಆದ್ಯ, ಅನನ್ಯ, ಅಪೇಕ್ಷಾ ಎನ್., ಪ್ರೀತಿ ಪ್ರಭು, ಶಾವ್ಯ ಯು.ರೈ, ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಾದ ಅಭಿನವ ಕೃಷ್ಣ, ಕೆ.ಪ್ರಥ್ವಿ, ಸಪ್ನಾ ಎಸ್., ಶ್ರೀರಕ್ಷಾ, ಶೇ 100 ಫಲಿತಾಂಶ ದಾಖಲಿಸಿದ ಶಾಲೆಗಳ ಮುಖ್ಯಸ್ಥರನ್ನು ಅಭಿನಂದಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-29-201232346

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.