ಪುತ್ತೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಪುತ್ತೂರು ತಾಲ್ಲೂಕು ಮಟ್ಟದಲ್ಲಿ ದಾಖಲಾತಿ ಆಂದೋಲನ ಆಯೋಜಿಸಲಾಗುತ್ತಿದ್ದು, ತಾಲ್ಲೂಕಿನಲ್ಲಿ ಕಳೆದ ವರ್ಷಕ್ಕಿಂತ ಶೇ 5ರಷ್ಟು ಹೆಚ್ಚು ದಾಖಲಾತಿ ಗುರಿ ಹೊಂದಲಾಗಿದೆ ಎಂದು ಪುತ್ತೂರು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ. ತಿಳಿಸಿದರು.

ಪುತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರಿ ಶಾಲೆಗಳಲ್ಲಿ ಸಿಗುವ ಗುಣಮಟ್ಟದ ಶಿಕ್ಷಣದ ಜತೆಗೆ ವಿವಿಧ ಸವಲತ್ತುಗಳ ಕುರಿತು ಪೋಷಕರ ಮನವೊಲಿಸಿ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದರು.

ರಾಜ್ಯದ 15 ಜಿಲ್ಲೆಗಳಲ್ಲಿ ದ್ವಿಭಾಷಾ ಬೋಧನಾ ಕಲಿಕೆಯನ್ನು ಸರ್ಕಾರ ಜಾರಿ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಬೋಧನೆ ಅನುಷ್ಠಾನಗೊಳ್ಳಲಿದೆ. ಈ ಬಾರಿ ಅವಿಭಜಿತ ಪುತ್ತೂರು ತಾಲ್ಲೂಕಿನಲ್ಲಿ ಎಸ್ಎಸ್ಎಲ್ಸಿಯಲ್ಲಿ ಶೇ 98.58 ಫಲಿತಾಂಶ ಬಂದಿದೆ. ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಗಳ ಫಲಿತಾಂಶ ಶೇ 96 ಆಗಿದ್ದು, 23 ಶಾಲೆಗಳ ಪೈಕಿ 14 ಸರ್ಕಾರಿ ಶಾಲೆಗಳು ಶೇ 100 ಫಲಿತಾಂಶ ದಾಖಲಿಸಿವೆ ಎಂದು ಹೇಳಿದರು.

ಅವಿಭಜಿತ ತಾಲ್ಲೂಕಿನ 23 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ– ಯುಕೆಜಿ ತರಗತಿ ನಡೆಸಲಾಗುತ್ತಿದ್ದು, 2 ಕೆಪಿಎಸ್ ಶಾಲೆಗಳು, 3 ಪಿಎಂಶ್ರೀ ಶಾಲೆಗಳು ಕಾರ್ಯಾಚರಿಸುತ್ತಿವೆ. 210 ಶಿಕ್ಷಕರ ಕೊರತೆ ಇದ್ದು, ಅದನ್ನು ಜೂನ್ ಪ್ರಾರಂಭದಲ್ಲೇ ಅತಿಥಿ ಶಿಕ್ಷಕರ ನೇಮಕದ ಮೂಲಕ ಭರ್ತಿ ಮಾಡಲಾಗುತ್ತದೆ. ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿಗೆ ಸಂಬಂಧಿಸಿ ₹90 ಲಕ್ಷದ ಕ್ರಿಯಾಯೋಜನೆ ಕಳುಹಿಸಲಾಗಿದ್ದು, 52 ಕೊಠಡಿಗಳ ದುರಸ್ತಿಯ ಬೇಡಿಕೆ ಇದೆ ಎಂದು ಅವರು ತಿಳಿಸಿದರು.

ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ ನವೀನ್ ಸ್ಟೀಫನ್, ಪ್ರಭಾರ ದೈಹಿಕ ಶಿಕ್ಷಣ ಪರಿವೀಕ್ಷಕ ಚಕ್ರಪಾಣಿ ಎ.ವಿ., ಶಿಕ್ಷಣ ಸಂಯೋಜಕ ಹರಿಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-29-1439583534

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.