ಪುತ್ತೂರು: ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡಿದಾಗ ಅವರ ಪೋಷಕರಿಗೆ ಎಲ್ಲರಿಗಿಂತ ಹೆಚ್ಚು ಸಂತೋಷವಾಗುತ್ತದೆ. ನಾವು ಸಾಧಕರನ್ನು ಸನ್ಮಾನಿಸುವುದರಿಂದ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗುತ್ತದೆ. ಸಾಧನೆ ಮಾಡಬೇಕಾದರೆ ಸರಿಯಾದ ಮಾರ್ಗದರ್ಶನ, ಪ್ರೋತ್ಸಾಹ ಅಗತ್ಯ ಎಂದು ಕೆನರಾ ಕಾಲೇಜಿನ ಸಂಚಾಲಕ ಜಗನ್ನಾಥ್ ಕಾಮತ್ ಹೇಳಿದರು.

ಪುತ್ತೂರಿನ ಸೇಂಟ್ ಫಿಲೋಮಿನಾ ಸ್ವಾಯತ್ತ ಕಾಲೇಜಿನ ರಜತ ಮಹೋತ್ಸವ ಸಭಾಂಗಣದಲ್ಲಿ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಫಾ.ಲಾರೆನ್ಸ್ ಮಸ್ಕರೇನ್ಹಸ್ ಅವರು, ಅವಕಾಶಗಳು ಎಲ್ಲರಿಗೂ ಸಿಗುತ್ತವೆ. ಇಂದು ಹಿಂದೆಂದಿಗಿಂತಲೂ ಹೆಚ್ಚು ಅವಕಾಶಗಳು ಲಭ್ಯವಿದೆ. ಆದರೆ, ನಾವು ಅದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ. ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವುದು ನಮ್ಮ ಕೈಯಲ್ಲಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಫಾ.ಆ್ಯಂಟನಿ ಪ್ರಕಾಶ್ ಮೊಂತೆರೊ ಮಾತನಾಡಿದರು.

ಮಂಗಳೂರು ವಿಶ್ವವಿದ್ಯಾನಿಲಯವು 2024-25ನೇ ಸಾಲಿನಲ್ಲಿ ನಡೆಸಿದ ಪದವಿ ಪರೀಕ್ಷೆಗಳಲ್ಲಿ ಎಂಎಸ್ಸಿ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದ ಶ್ರೀದೇವಿ, ಮತ್ತು 4ನೇ ರ್ಯಾಂಕ್ ಗಳಿಸಿರುವ ಆಯಿಷತ್ ಸಮ ಅವರನ್ನು ಗೌರವಿಸಲಾಯಿತು.

ಬಿಎ ವಿಭಾಗದಲ್ಲಿ 8ನೇ ರ್ಯಾಂಕ್ ಪಡೆದ ಮಾದ್ರಿ ಅರ್ಚನಾ ಮತ್ತು ಬಿಬಿಎ ವಿಭಾಗದಲ್ಲಿ 10ನೇ ರ್ಯಾಂಕ್ ಗಳಿಸಿದ ಶಾಯಿರಿನ್ ಬಾನು ಅವರನ್ನು ಅಭಿನಂದಿಸಲಾಯಿತು. ವಿಜ್ಞಾನ ವಿಭಾಗದ ಮುಖ್ಯಸ್ಥೆ ಮಾಲಿನಿ, ಉಪನ್ಯಾಸಕರಾದ ಪ್ರಶಾಂತ್ ರೈ ಸಾಧಕರನ್ನು ಪರಿಚಯಿಸಿದರು.

ಬಿಎ ವಿಭಾಗದ ಮುಖ್ಯಸ್ಥ ನೋರ್ಬರ್ಟ್ ಮಸ್ಕರೇನ್ಹಸ್ ಇದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಾಧಾಕೃಷ್ಣ ಗೌಡ ಸ್ವಾಗತಿಸಿದರು. ಸ್ಪರ್ಲ್ ಫಿಯೋನಾ ಪಿರೇರಾ ವಂದಿಸಿದರು. ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಶ್ರೀವಿದ್ಯಾ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-29-1710110934

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.