ಪುತ್ತೂರು: ‘ಪುತ್ತೂರು ತಾಲ್ಲೂಕಿನ ಬೆಟ್ಟಂಪಾಡಿ, ಕೋಡಿಂಬಾಡಿ, ಬಜತ್ತೂರು ಮತ್ತು ನೆಟ್ಟಣಿಗೆಮುಡ್ನೂರು ಸೇರಿ ಒಟ್ಟು 4 ಕೆಪಿಎಸ್ ಶಾಲೆಗಳು ಅನುಷ್ಠಾನಗೊಳ್ಳಲಿವೆ. ಒಂದು ಹೆಚ್ಚುವರಿ ಕೆಪಿಎಸ್ ಶಾಲೆ ನೀಡುವಂತೆ ಕೇಳಿಕೊಳ್ಳಲಾಗಿದೆ. ಪ್ರತಿ ಗ್ರಾಮಕ್ಕೆ ಕೆಪಿಎಸ್ ಶಾಲೆಗಳನ್ನು ನೀಡುವ ಯೋಚನೆ ಸರ್ಕಾರದ ಮುಂದಿದೆ’ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಪುತ್ತೂರಿನ ಸಾಮೆತ್ತಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಿಕ್ಷಣ ಇಲಾಖೆ ವತಿಯಿಂದ ನಡೆದ ತಾಲ್ಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ, ನವ ಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ) ವತಿಯಿಂದ ನಿರ್ಮಾಣಗೊಂಡ ತರಗತಿ ಕೊಠಡಿ ಹಾಗೂ ಮಕ್ಕಳ ಆಟದ ಸ್ಥಳ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಶಾಲೆಯಲ್ಲಿ ಶೇ 40ರಷ್ಟು ಕಲಿತರೆ ಶೇ 60ರಷ್ಟನ್ನು ಮನೆಯಲ್ಲಿ ಕಲಿಯುತ್ತಾರೆ. ಹೀಗಾಗಿ ಪೋಷಕರು ಕೂಡ ತಮ್ಮ ಮಕ್ಕಳ ಶಿಕ್ಷಣದ ಕುರಿತು ಕಾಳಜಿ ವಹಿಸಬೇಕಿದೆ. ಶಿಕ್ಷಕರ ಕೊರತೆ ನೀಗಿಸಲು ಮುಂದಿನ 6 ತಿಂಗಳೊಳಗೆ ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ. ಅತಿಥಿ ಶಿಕ್ಷಕರನ್ನು ನೀಡಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದರು.

ಪುತ್ತೂರು ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಶೆಟ್ಟಿ, ಶಾಲಾ ಸ್ಥಾಪಕಾಧ್ಯಕ್ಷ ಸಾಮೆತಡ್ಕ ಗೋಪಾಲಕೃಷ್ಣ ಭಟ್, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮೋನಪ್ಪ ಎಂ., ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ., ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸಿಲ್ವಿಯಾ ಅಸುಂತಾ ಕ್ಯಾಸ್ಟಲಿನೊ, ಎಸ್ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಕೆಮ್ಮಿಂಜೆ, ಸಿಆರ್ಪಿ ಶಶಿಕಲಾ, ಪ್ರಮುಖರಾದ ದಿನೇಶ್ ಕಾಮತ್, ಮುಖ್ಯಶಿಕ್ಷಕಿ ಜಲಜಾಕ್ಷಿ ಭಾಗವಹಿಸಿದ್ದರು. ಶಿಕ್ಷಕಿ ಮರಿಯಮ್ಮ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ವಿದ್ಯಾರ್ಥಿಗಳನ್ನು ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-29-1919345803

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.