ಪುತ್ತೂರು: ‘ಜಗತ್ತಿನ ಶ್ರೇಷ್ಠ ವೃತ್ತಿಗಳಲ್ಲಿ ಶಿಕ್ಷಕ ವೃತ್ತಿಯೂ ಒಂದು. ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಮೂಡಿಸಿ ಉತ್ತಮ ಜೀವನ ರೂಪಿಸುವಲ್ಲಿ ಗುರುವಿನ ಪಾತ್ರ ಪ್ರಮುಖವಾದುದು’ ಎಂದು ನಿವೃತ್ತ ಮುಖ್ಯಶಿಕ್ಷಕ ಮುನಿರಾಜ ರೆಂಜಾಳ ಹೇಳಿದರು.

ಪುತ್ತೂರಿನ ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯುಎಸಿ, ತೆಂಕಿಲದ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ನಡೆದ ವಿವೇಕ ಸ್ಮೃತಿ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

‘ನಮ್ಮನ್ನು ಶೂನ್ಯ ಎಂದು ಪರಿಗಣಿಸುವವರ ಮುಂದೆ ನಾವು ಸಾಧಿಸಿ ತೋರಿಸುವುದು ಬಹಳ ಮುಖ್ಯ‘ ಎಂದು ಹೇಳಿದರು. ವಿವೇಕಾನಂದ ಬಿಇಡಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ರಮೇಶ ನಾಯಕ್ ಅಧ್ಯಕ್ಷತೆ ವಹಿಸಿದ್ದರು.

ವಿವೇಕಾನಂದ ಬಿಇಡಿ ಕಾಲೇಜಿನ ಪ್ರಾಂಶುಪಾಲೆ ಶೋಭಿತಾ ಸತೀಶ್, ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ವಿದ್ಯಾ ಎಸ್. ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-29-825745310

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.