ಪುತ್ತೂರು: ನಿರ್ಗತಿಕರಿಗೆ ಪುನರ್ವಸತಿ ಸೇರಿದಂತೆ ಶಿಕ್ಷಣ, ಸಾಹಿತ್ಯ, ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪುತ್ತೂರು ಉಮೇಶ್ ನಾಯಕ್ ಅವರು ಮಾದರಿ ಸಮಾಜ ಸೇವಕ ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಹೇಳಿದರು.

ಕೆದಂಬಾಡಿ ಗ್ರಾಮದ ಸಿರಿ ಕಡಮಜಲು ಕೃಷಿ ಕ್ಷೇತ್ರದಲ್ಲಿ ನಡೆದ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರಕೃತಿ ವೀಕ್ಷಣೆ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಗತಿಪರ ಕೃಷಿಕ ಕಡಮಜಲು ಸುಭಾಷ್ ರೈ ಮಾತನಾಡಿ, ಉಮೇಶ್ ನಾಯಕ್ ಅವರು ಗ್ರಾಮ ಸಾಹಿತ್ಯ ಸಂಭ್ರಮದ ಮೂಲಕ ಗ್ರಾಮಗಳಿಗೆ ಸಾಹಿತ್ಯದ ಕಂಪನ್ನು ಪಸರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಹುಟ್ಟಿಸಿದ್ದಾರೆ ಎಂದರು. ಸನ್ಮಾನ ಸ್ವೀಕರಿಸಿದ ಉಮೇಶ್ ನಾಯಕ್, ಸಾಧ್ಯವಾಗುವ ಸಮಾಜ ಸೇವೆಗಳನ್ನು ಮುಂದುವರಿಸಿಕೊಂಡು ಹೋಗುತ್ತೇನೆ ಎಂದರು.

ಕೃಷಿಕ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ಕುಮಾರ್ ರೈ ಕೋರಂಗ, ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ, ನಿವೃತ್ತ ಸೈನಿಕ ರಮೇಶ್ ರೈ ಬೊಳಿಕ್ಕಲ, ಚೆನ್ನಾವರ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಮಲ್ಲೇಶಯ್ಯ, ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಹರ್ಷಿತಾ, ಪ್ರೀತಿ ಸುಭಾಷ್ ರೈ ಕಡಮಜಲು ಭಾಗವಹಿಸಿದ್ದರು.

ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಹೋಬಳಿ ಘಟಕದ ಕೋಶಾಧ್ಯಕ್ಷ ಎ.ಕೆ.ಜಯರಾಮ ರೈ ವಂದಿಸಿದರು. ಕಾರ್ಯದರ್ಶಿ ಸಿಶೇ ಕಜೆಮಾರ್ ನಿರೂಪಿಸಿದರು.

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಚೆನ್ನಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿದ್ದು, 50 ಶಿಬಿರಾರ್ಥಿಗಳು ಸಿರಿ ಕಡಮಜಲು ಕ್ಷೇತ್ರಕ್ಕೆ ಭೇಟಿ ನೀಡಿ ಕೃಷಿ ಅನುಭವ ಪಡೆದುಕೊಂಡರು.ಬಳಿಕ ಸಂವಾದ ನಡೆಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-29-671696399

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.