ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರಿ ಕ್ಷೇತ್ರದಲ್ಲಿನ ಅವಕಾಶ ಹೇಗಿದೆ?

ನಿಮ್ಮ ಪ್ರಶ್ನೆಗೆ ತಜ್ಞರ ಉತ್ತರ
Published : 30 ಸೆಪ್ಟೆಂಬರ್ 2024, 0:30 IST
Last Updated : 30 ಸೆಪ್ಟೆಂಬರ್ 2024, 0:30 IST
ಫಾಲೋ ಮಾಡಿ
Comments

ಸರ್ಕಾರಿ ಕ್ಷೇತ್ರದಲ್ಲಿನ ಅವಕಾಶ ಹೇಗಿದೆ?

ಪ್ರ

ನಾನೀಗ ಅಂತಿಮ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದು, ಸರ್ಕಾರಿ ಕ್ಷೇತ್ರದಲ್ಲಿನ ಅವಕಾಶಗಳ ಬಗ್ಗೆ ತಿಳಿಸಿ. -ಹೆಸರು, ಊರು ತಿಳಿಸಿಲ್ಲ.

ಎಂಜಿನಿಯರಿಂಗ್ ಪದವೀಧರರಿಗೆ ಸರ್ಕಾರಿ ವಲಯದಲ್ಲಿ ಆಕರ್ಷಕ ಉದ್ಯೋಗಾವಕಾಶಗಳಿವೆ. ಮೂಲಸೌಕರ್ಯ ಅಭಿವೃದ್ಧಿ, ಲೋಕೋಪಯೋಗಿ, ಇಂಧನ, ಮಾಹಿತಿ ತಂತ್ರಜ್ಞಾನ, ನೀರಾವರಿ, ಯೋಜನೆ, ಸಾರಿಗೆ, ನಗರಾಭಿವೃದ್ಧಿ, ಕೈಗಾರಿಕೆ, ಮಾಹಿತಿ ತಂತ್ರಜ್ಞಾನ ಮುಂತಾದ ಇಲಾಖೆಗಳಲ್ಲಿ ಉದ್ಯೋಗವನ್ನು ಅರಸಬಹುದು. ಹಾಗೂ, ಯುಪಿಎಸ್‌ಸಿ, ಕೆಪಿಎಸ್‌ಸಿ, ರೈಲ್ವೇಸ್, ಬ್ಯಾಂಕಿಂಗ್ ಕ್ಷೇತ್ರಗಳಲ್ಲಿಯೂ ಮತ್ತು ಇಸ್ರೊ, ಡಿಆರ್‌ಡಿಒ, ಬಿಎಆರ್‌ಸಿ, ಸಿಎಸ್‌ಐಆರ್ ಮುಂತಾದ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಗಳಲ್ಲಿಯೂ ವೃತ್ತಿಯನ್ನು ಅರಸಬಹುದು.ನಿಮ್ಮ ಸ್ವಾಭಾವಿಕ ಪ್ರತಿಭೆ, ಆಸಕ್ತಿ ಮತ್ತು ಕೌಶಲಗಳನ್ನು ಗಮನಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರಿ ಕ್ಷೇತ್ರದಲ್ಲಿ ಭವಿಷ್ಯವನ್ನು ರೂಪಿಸಿಕೊಳ್ಳಬಹುದು.

ಹೆಚ್ಚಿನ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ:

ಪ್ರ

ಸರ್, ಪಿಯುಸಿ (ವಾಣಿಜ್ಯ) ನಂತರ ಯಾವ ಆಯ್ಕೆಯನ್ನು ಮಾಡಿದರೆ ಒಳ್ಳೆಯದು?
- ಹೆಸರು, ಊರು ತಿಳಿಸಿಲ್ಲ.

ಪಿಯುಸಿ (ವಾಣಿಜ್ಯ) ನಂತರ ಕೋರ್ಸ್ ಆಯ್ಕೆಗಳೆಂದರೆ ಸಿಎ (ಫೌಂಡೇಷನ್ ಕೋರ್ಸ್ ಮುಖಾಂತರ), ಬಿಕಾಂ (ಜನರಲ್, ಹಾನರ್ಸ್, ಬ್ಯಾಂಕಿಂಗ್, ಫೈನಾನ್ಸ್, ಟೂರಿಸಮ್, ಪ್ರೊಫೆಷನಲ್, ಇಂಟರ್‌ನ್ಯಾಷನಲ್ ಫೈನಾನ್ಸ್ ಇತ್ಯಾದಿ), ಬಿಬಿಎ, ಬಿಸಿಎ, ಬಿಎಸ್‌ಡಬ್ಲ್ಯೂ, ಎಸಿಎಸ್, ಸಿಎಂಎ, ಇಂಟಿಗ್ರೇಟೆಡ್ ಎಲ್‌ಎಲ್‌ಬಿ ಇತ್ಯಾದಿ.

ಹೆಚ್ಚಿನ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ:  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT