ರಬಕವಿ ಬನಹಟ್ಟಿ: ‘ವಿದ್ಯಾರ್ಥಿಗಳು ಸರಿಯಾದ ಮಾರ್ಗದಲ್ಲಿ ನಡೆದು ಒಳ್ಳೆಯ ಮತ್ತು ಹೊಸ ವಿಚಾರಗಳಲ್ಲಿ ಭಾಗಿಯಾಗಬೇಕು’ ಎಂದು ಸಿದ್ದಾಪುರದ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆಯ ಕಾರ್ಯ ನಿರ್ವಾಹಕ ನಿರ್ದೇಶಕ ವಿರೂಪಾಕ್ಷಯ್ಯ ಗುಡಗುಂಟಿಮಠ ತಿಳಿಸಿದರು.

ಇಲ್ಲಿನ ಕೆಎಲ್ಇ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶನಿವಾರ ನಡೆದ ಸೃಜನೋತ್ಸವ– 2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಗುರಿ, ಕಲಿಕೆ, ಧೈರ್ಯ ಈ ಮೂರು ವಿಚಾರಗಳನ್ನು ಎಂದಿಗೂ ಮರೆಯಬಾರದು. ಪಾಲಕರು ಮಕ್ಕಳ ಸೃಜನಶೀಲತೆಗೆ ಕೈಜೋಡಿಸಬೇಕು. ಮಾಡುವ ಕಾರ್ಯದಲ್ಲಿ ಮನಸ್ಸನ್ನು ತೊಡಗಿಸಿ ಕಾರ್ಯ ನಿರ್ವಹಿಸಿದರೆ ಗೆಲುವು ಸಾಧ್ಯ’ ಎಂದರು.

ಜಮಖಂಡಿ ಕೃಷಿ ಇಲಾಖೆ ಸಹಾಯಕ ನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ, ಕೆಎಲ್ಇ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಬಿ. ಪಾಟೀಲ ಮಾತನಾಡಿದರು. ಜಮಖಂಡಿ ಓಲೆಮಠದ ಆನಂದ ದೇವರು ಸಾನ್ನಿಧ್ಯ ವಹಿಸಿದ್ದರು. ಪ್ರಾಚಾರ್ಯ ಎಸ್.ಐ. ಕುಂದಗೊಳ ಅವರು ವಾರ್ಷಿಕ ವರದಿ ವಾಚಿಸಿದರು.

ಸ್ಥಳೀಯ ಸಂಸ್ಥೆಯ ನಿರ್ದೇಶಕ ಅಶೋಕ ಅಂಗಡಿ, ಉಮೇಶ ಹಾದಿಮನಿ, ವಂದನಾ ಪಾಸಾರ, ವಿವಿಧ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-19-956536932

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.