ರಾಯಬಾಗ: ‘ಜಿಲ್ಲೆಯಲ್ಲಿ ಮೊದಲ ಬಾರಿಗೆ ಪಟ್ಟಣದ ವಿಶ್ವಚೇತನ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ತಂತ್ರಜ್ಞಾನ ಅಳವಡಿಸಲಾಗಿದ್ದು, ಇದು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ’ ಎಂದು ಗ್ರಾಮೀಣ ಸಮೂಹ ಸಂಪನ್ಮೂಲ ಅಧಿಕಾರಿ ಎಂ.ಎನ್. ತಾಸೀವಾಲೆ ಹೇಳಿದರು.

ಪಟ್ಟಣದ ವಿಶ್ವಚೇತನ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಬುಧವಾರ ನಡೆದ ಹೊಸ ಕಲಿಕಾ ತಂತ್ರಜ್ಞಾನ ಮತ್ತು ಶೈಕ್ಷಣಿಕ ಸಂಪನ್ಮೂಲಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಎಐ ತಂತ್ರಜ್ಞಾನವು ವಿದ್ಯಾರ್ಥಿಗಳ ಕಲಿಕಾ ವಿಧಾನದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನವೀನ ಶಿಕ್ಷಣದ ದಾರಿ ತೆರೆದಿಡಲಿದೆ’ ಎಂದು ತಿಳಿಸಿದರು.

ಮುಖ್ಯ ಶಿಕ್ಷಕಿ ವಿದ್ಯಾ ನಾಯಿಕ ಮಾತನಾಡಿ, ‘ಇಂತಹ ತಂತ್ರಜ್ಞಾನ ಸೌಲಭ್ಯಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಹಾಗೂ ತಾಂತ್ರಿಕ ನೈಪುಣ್ಯವನ್ನು ವೃದ್ಧಿಸಲು ಸಹಕಾರಿಯಾಗುತ್ತವೆ’ ಎಂದು ತಿಳಿಸಿದರು.

ಡಿಜಿಟಲ್ ವ್ಯವಸ್ಥೆಗಳ ಬಳಕೆ ಮೂಲಕ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಶಾಲೆಯ ಸಂಸ್ಥಾಪಕರಾದ ನಾಯಿಕ ದಂಪತಿ ಪ್ರಯತ್ನ ಶ್ಲಾಘನೀಯವಾಗಿದೆ ಎಂದು ಸಂಗೀತಾ ಮಹೇಂದ್ರಕರ್ ಹೇಳಿದರು.

ಶಿಕ್ಷಣ ಸಂಯೋಜಕ ಲಕ್ಕಪ್ಪ ಬಿದರಿ, ಮನೋಹರ ಪೂಜೇರಿ, ಅನಿಲ ಸುತಾರ,ಷಣ್ಮುಗಂ ಕೆ., ಚೇತನ ನಾಯಿಕ ಮಾತನಾಡಿದರು. ರೋಬೋ ಟೀಚರ್, ಸ್ಟೆಮ್ ಮತ್ತು ರೊಬೋಟಿಕ್ಸ್ ಲ್ಯಾಬ್, ಕಂಪ್ಯೂಟರ್ ಲ್ಯಾಬ್, ಟಾಕಿಂಗ್ ಟ್ರೀ ಮತ್ತು ಮ್ಯಾಜಿಕ್ ಮ್ಯಾಟ್, ಫಿಸಿಕಲ್ ರೂಮ್, ಅನುಶ್ರೀ ಗ್ರಂಥಾಲಯ, ಪ್ಲೇ ರೂಮ್ ಸೇರಿದಂತೆ ವಿವಿಧ ಸೌಲಭ್ಯಗಳ ಉದ್ಘಾಟನೆ ನೆರವೇರಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-21-1643971225

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.