ರಾಯಚೂರು: ‘ಸಮಾನತೆ ಇಲ್ಲದ ಸ್ವಾತಂತ್ರ್ಯ ಅಪೂರ್ಣ ಎಂದು ಡಾ. ಬಾಬು ಜಗಜೀವನರಾಂ ಅವರು ಅಂದೇ ಹೇಳಿದ್ದರು. ಹೀಗಾಗಿ ಸಮಾಜದಲ್ಲಿ ಜಾತಿ ಬೇಧ ಮರೆತು ಸಮಾನತೆಗಾಗಿ ಎಲ್ಲರೂ ಶ್ರಮಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ. ನಿತೀಶ್ ಹೇಳಿದರು.

ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಏರ್ಪಡಿಸಿದ್ದ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಬಾಬು ಜಗಜೀವನರಾಂ ಅವರು ಬಿಹಾರದಲ್ಲಿ ಜನಿಸಿದಾಗ ಜಾತಿ ವ್ಯವಸ್ಥೆಯ ತಾರತಮ್ಯ ಬಲವಾಗಿ ಬೇರೂರಿತ್ತು. ಅನೇಕ ಕಹಿ ಘಟನೆಗಳನ್ನು ಎದುರಿಸಿ ಹೋರಾಡಿ ಇತಿಹಾಸ ನಿರ್ಮಿಸಿ ಶಿಕ್ಷಣವೇ ನಮಗೆ ಶಕ್ತಿ ಎಂದು ಶೋಷಿತ ಸಮುದಾಯಕ್ಕೆ ತಿಳಿಸಿದ್ದರು’ ಎಂದರು.

‘ಗಾಂಧೀಜಿಯವರ ಪ್ರೇರಣೆಯಿಂದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿದ್ದರು. ಸಂವಿಧಾನ ರಚನಾ ಸಮಿತಿ ಸದಸ್ಯರಾಗಿ ಶೋಷಿತ ಜನರಿಗೆ ಹಕ್ಕು ನೀಡುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದರು. ನನ್ನ ಹೋರಾಟ ಆಂಗ್ಲರ ವಿರುದ್ಧ ಅಲ್ಲ; ಅಸಮಾನತೆ ವಿರುದ್ಧವೆಂದು ಗುಡುಗಿದ್ದರು’ ಎಂದು ತಿಳಿಸಿದರು.

‘ದೇಶದ ಸಂವಿಧಾನ ರಚನೆಯಾದ ನಂತರ ಕೇಂದ್ರ ಸರ್ಕಾರದಲ್ಲಿ ವಿವಿಧ ಇಲಾಖೆಗಳ ಸಚಿವರಾಗಿದ್ದರು. ಕೃಷಿ ಸಚಿವರಾಗಿ ದೇಶದಲ್ಲಿ ಹಸಿರು ಕ್ರಾಂತಿಯನ್ನೇ ಮಾಡಿದರು. ಸಂಕಷ್ಟ ನಮಗೆ ಬರುವುದು ಶಕ್ತಿಶಾಲಿಯಾಗಿ ಮಾಡಲು ಬಲಹೀನರಾಗಿ ಮಾಡಲು ಅಲ್ಲ ಎಂದು ತಳ ಸಮುದಾಯದ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರು’ ಎಂದು ಹೇಳಿದರು.

ರಾಯಚೂರು ಮಹಾನಗರ ಪಾಲಿಕೆಯ ಸದಸ್ಯ ಕಾರ್ಯದರ್ಶಿ ಕೃಷ್ಣ ಶಾವಂತಗೇರಾ ಮಾತನಾಡಿದರು. ಮಾನ್ವಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಬಸವರಾಜ ಕರಡಿಗುಡ್ಡ ಉಪನ್ಯಾಸ ನೀಡಿದರು.

ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಅವರು ಭಾರತ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ: ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಶ್ರೇಯಾ ಸೋಮಪ್ಪ, ಶ್ರೀದೇವಿ ಶಿವರಾಜ, ಸ್ಪೂರ್ತಿ ಬಂಡಿವಡ್ಡರ ಶಿವಪ್ಪ ಅವರನ್ನು ಸನ್ಮಾನಿಸಲಾಯಿತು.

ಜಗಜೀವನರಾಂ ಜಯಂತಿ ಅಂಗವಾಗಿ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಬಾಬೂಜಿ ಜೀವನ, ಹೋರಾಟ, ಸಾಧನೆ ಕುರಿತು ಅವರ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು.

ಜಿ.ಪಂ. ಸಿಇಒ ಈಶ್ವರಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಾಪಾತ್ರ, ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಜೇಂದ್ರ ಜಲ್ದಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರವೀಣಕುಮಾರ ಉಪಸ್ಥಿತರಿದ್ದರು.

ಜಿಲ್ಲಾಡಳಿತ, ಜಿ.ಪಂ., ರಾಯಚೂರು ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಗಣ್ಯರಿಂದ ಮಾಲಾರ್ಪಣೆ, ಬಾಬೂಜಿ ಭಾವಚಿತ್ರದ ಮೆರವಣಿಗೆ: ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 119ನೇ ಜನ್ಮ ದಿನಾಚರಣೆಯ ಪ್ರಯುಕ್ತ ನಗರದ ರೈಲು ನಿಲ್ದಾಣದ ಸಮೀಪದ ಜಗಜೀವನರಾಂ ಅವರ ಪುತ್ಥಳಿಗೆ ಗಣ್ಯರು ಹಾಗೂ ಅಧಿಕಾರಿಗಳು ಮಾಲಾರ್ಪಣೆ ಮಾಡಿದರು.

ನಂತರ ಬಾಬೂಜಿ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕಲಾ ತಂಡಗಳು ಕಳೆ ಕಟ್ಟಿದ್ದವು. ಯುವಕರು ಡಿಜೆ ಹಾಡಿಗೆ ಹೆಜ್ಜೆ ಹಾಕಿದರು. ಮುಖಂಡರಾದ ರವಿ ಭೋಸರಾಜು, ನರಸಿಂಹಲು ಮಾಡಗಿರಿ, ಕೆ.ಶಾಂತಪ್ಪ, ಎಂ.ವಿರೂಪಾಕ್ಷಪ್ಪ, ರಾಜು, ಪವನಕುಮಾರ, ರಾಜೇಂದ್ರ ಜಲ್ದಾರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-32-1727233386

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.