ರಾಯಚೂರು: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಅನುದಾನದಡಿ ನೇಮಕಗೊಂಡಿರುವ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ ಆಗದಿರುವುದನ್ನು ಖಂಡಿಸಿ ಏ. 28ರಂದು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ಏರ್ಪಡಿಸಲಾಗಿದೆ ಎಂದು ಎಐಡಿವೈಒ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವ ಜಾನೇಕಲ್ ತಿಳಿಸಿದರು.

ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಹಾಗೂ 1ರಿಂದ 5ನೇ ತರಗತಿಗಳ ಬೋಧನೆಗಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಆದರೆ ಕಳೆದ ಹಲವು ತಿಂಗಳಿನಿಂದ ಗೌರವಧನ ಬಿಡುಗಡೆಯಾಗದೆ ಅವರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಸಂಯೋಜನೆಯ ಕೊರತೆಯಿಂದ ಶಿಕ್ಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಕೆಆರ್ಡಿಬಿ ಅಧಿಕಾರಿಗಳು ಕೂಡಲೇ ಬಾಕಿ ಗೌರವಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-32-1663812824

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.