ರಾಯಚೂರು: ಜೇಗರಕಲ್ ಕೆಪಿಎಸ್ ಶಾಲೆಗೆ ಜೆ.ಮಲ್ಲಾಪುರ ಗ್ರಾಮದ ಶಾಲೆಯನ್ನು ವಿಲೀನಗೊಳಿಸಬಾರದು ಎಂದು ಒತ್ತಾಯಿಸಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಪದಾಧಿಕಾರಿಗಳು ಜೇಗರಕಲ್ನಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಬಜೆಟ್ನಲ್ಲಿ ಘೋಷಿಸಿರುವಂತೆ ಜೂನ್ನಿಂದಲೇ ಹೊಸ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಈ ಶಾಲೆಗಳ 3ರಿಂದ 5 ಕಿ.ಮೀ ವ್ಯಾಪ್ತಿಯ ಶಾಲೆಗಳನ್ನು ವಿಲೀನಗೊಳಿಸಲಾಗುತ್ತದೆ. ನಮ್ಮೂರ ಶಾಲೆ ಉಳಿಯಬೇಕು ಮತ್ತು ಕೆಪಿಎಸ್ ಯೋಜನೆ ರದ್ದು ಮಾಡುವಂತೆ ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಿಕೊಂಡು ಐದು ತಿಂಗಳಿಂದ ಗ್ರಾಮಸ್ಥರು ಹಾಗೂ ಪೋಷಕರು ಹೋರಾಟ ಮಾಡುತ್ತಿದ್ದಾರೆ. ಗ್ರಾಮ ಮಟ್ಟದಿಂದ ಆರಂಭಿಸಿ ಜಿಲ್ಲಾ ಹಾಗೂ ರಾಜ್ಯ ಮಟ್ಟದವರೆಗೆ ಪ್ರತಿಭಟನೆ ಹಾಗೂ ಸಭೆಗಳನ್ನು ನಡೆಸಿದ್ದೇವೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹಿಂಪಡೆಯಬೇಕು ಎಂದರು.

ನಂತರ ಜೇಗರಕಲ್ ಪಿಡಿಒ ಕರೆಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಗ್ರಾಮದ ಮುಖಂಡರು, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನಾಗನಗೌಡ, ಮಲ್ಲನಗೌಡ, ಸುರೇಶ ಗೌಡ, ಶಂಕರಪ್ಪ, ಸಿದ್ದಪ್ಪ, ಸುಶಾಂತ್, ಗಂಗಪ್ಪ, ಚಂದ್ರು, ಹುಸೇನಿ, ವೆಂಕಟೇಶ್ ಮತ್ತು ಜಿಲ್ಲಾ ಉಪಾಧ್ಯಕ್ಷ ಚನ್ನಬಸವ ಜಾನೇಕಲ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-32-1469327925

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.