ರಾಯಚೂರು: ರಾಜ್ಯ ಸರ್ಕಾರ 2026-27ರಿಂದ ರಾಜ್ಯದಾದ್ಯಂತ 800 ಕೆಪಿಎಸ್ (ಕರ್ನಾಟಕ ಪಬ್ಲಿಕ್ ಶಾಲೆ)ಗಳನ್ನು ಆರಂಭಿಸುವ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ), ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ಹಾಗೂ ಕನ್ನಡ ಮಿತ್ರಕೂಟದ ಪದಾಧಿಕಾರಿಗಳು ನಗರದ ನೂತನ ಜಿಲ್ಲಾಡಳಿತದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈಗಾಗಲೇ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಅಳಿವಿನ ಅಂಚಿನಲ್ಲಿವೆ.

ವಿದ್ಯಾರ್ಥಿಗಳ ದಾಖಲಾತಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ 800 ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಮುಂದಾಗಿರುವುದು ಕನ್ನಡ ಮಾಧ್ಯಮ ಶಾಲೆಗಳಿಗೆ ದೊಡ್ಡ ಹೊಡೆತವಾಗಿದೆ ಎಂದು ಪ್ರತಿಭಟನನಿರತರು ಆಕ್ರೋಶ ಹೊರಹಾಕಿದರು.

ರಾಜ್ಯದಲ್ಲಿ ಕನ್ನಡವೇ ರಾಜ್ಯ ಭಾಷೆಯಾಗಿದ್ದು, ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಕನ್ನಡ ಮಾಧ್ಯಮ ಶಾಲೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ, ಸರ್ಕಾರದ ಈ ನಿರ್ಧಾರ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವ ನೀತಿಗೆ ವಿರುದ್ಧವಾಗಿದ್ದು, ಕನ್ನಡ ಶಿಕ್ಷಣ ವ್ಯವಸ್ಥೆಯ ಮೇಲೆ ಕೊಡಲಿ ಪೆಟ್ಟು ಹಾಕಿದಂತಾಗಿದೆ ಎಂದು ಆರೋಪಿಸಿದರು.

ಸರ್ಕಾರ ತಕ್ಷಣವೇ 800 ಕೆಪಿಎಸ್ ಶಾಲೆಗಳ ಆರಂಭದ ನಿರ್ಧಾರ ಹಿಂಪಡೆದು, ಕನ್ನಡ ಮಾಧ್ಯಮ ಶಾಲೆಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ಸಹ ನೀಡಿದರು.

ಪ್ರತಿಭಟನೆಯಲ್ಲಿ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕಕುಮಾರ ಜೈನ್, ಜಿಲ್ಲಾ ಕನ್ನಡ ಕ್ರಿಯಾ ಸಮಿತ ಅಧ್ಯಕ್ಷ ರಫೀಕ್ ಅಹ್ಮದ್, ರಾಮಲಿಂಗಪ್ಪ ಕುಣಸಿ, ನಿಜಾಮುದ್ದೀನ್, ರಾಮಣ್ಣ ಮ್ಯಾದಾರ, ಮಲ್ಲಿಕಾರ್ಜುನ, ಬಶೀರ್ ಅಹ್ಮದ್ ಹೊಸಮನಿ, ಆಸೀಫ್, ಅಜೀಜ್, ರಾಮಣ್ಣ ಬೋಯಿ ಹಾಗೂ ರುದ್ರಯ್ಯ ಗುಣಾರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-32-223557414

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.