ರಾಯಚೂರು: ‘ಮೇ 3ರಂದು ರಾಯಚೂರು ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ನೀಟ್-ಯುಜಿ ಪರೀಕ್ಷೆ ನಡೆಯಲಿದೆ. ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಸಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ನೂತನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೀಟ್ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಎಲ್ಲರೂ ಪರೀಕ್ಷಾ ಮಾರ್ಗಸೂಚಿಗಳನ್ನು ಪಾಲಿಸಬೇಕು. ನೀಟ್ ಪರೀಕ್ಷೆ ಬಹಳ ಸೂಕ್ಷ್ಮವಾಗಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಬೇಕು’ ಎಂದರು.

‘ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಉಪನ್ಯಾಸಕರು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ಪ್ರಾಧಿಕಾರದ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು’ ಎಂದರು.

ಎಲೆಕ್ಟ್ರಾನಿಕ್ ಉಪಕರಣಗಳ ನಿಷೇಧ: ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಎಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಇಯರ್ ಫೋನ್ಗಳು, ಮೈಕ್ರೋಫೋನ್, ಕ್ಯಾಲ್ಕ್ಯುಲೇಟರ್ ಹಾಗೂ ಗಡಿಯಾರ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಸಿಸಿ ಟಿವಿ-ಜಾಮರ್: ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಜಾಮರ್ ಹಾಗೂ ಕೊಠಡಿಯೊಳಗೆ ಗಡಿಯಾರ ಅಳವಡಿಕೆ ಕಡ್ಡಾಯವಾಗಿದೆ. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಗಾಳಿ, ಬೆಳಕು, ಸೂಕ್ತ ಪೀಠೋಪಕರಣ ಒಳಗೊಂಡಂತೆ ಮೂಲಭೂತ ಸೌಕರ್ಯ ಒದಗಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ತಪಾಸಣಾ ಕಾರ್ಯಕ್ಕೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು ಎಂದು ರಾಯಚೂರಿನ ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯೆ ದೀಪಾಶ್ರೀ ಹೇಳಿದರು.

3,744 ಅಭ್ಯರ್ಥಿಗಳು: ನೀಟ್ ಪರೀಕ್ಷೆಗೆ ಜಿಲ್ಲೆಯಲ್ಲಿ 3,744 ಅಭ್ಯರ್ಥಿಗಳು ನೋಂದಣಿ ಮಾಡಲಾಗಿದ್ದು, ರಾಯಚೂರು ನಗರದ 11 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಮೇ 3ರ ಮಧ್ಯಾಹ್ನ 2 ರಿಂದ ಸಂಜೆ 5ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಕೇಂದ್ರಕ್ಕೆ ವಿದ್ಯಾರ್ಥಿಗಳು ಅಂದು ಬೆಳಿಗ್ಗೆ 11 ರಿಂದ 1.30ರೊಳಗಾಗಿ ಹಾಜರಾಗಬೇಕು ಎಂದು ತಿಳಿಸಿದರು.

ಕೆಕೆಆರ್ಟಿಸಿ ರಾಯಚೂರು ವಿಭಾಗದ ನಿಯಂತ್ರಣಾಧಿಕಾರಿ ಚಂದ್ರಶೇಖರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ, ಕೇಂದ್ರೀಯ ವಿದ್ಯಾಲಯದ ಶಿಕ್ಷಕ ಪವನ ಪಾಂಡೆ, ಪ. ಪೂ. ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿ, ಡಿಡಿಪಿಐ ಕೆ.ಡಿ.ಬಡಿಗೇರ, ಯರಮರಸ್ ಅದರ್ಶ ವಿದ್ಯಾಲಯದ ಪ್ರಾಚಾರ್ಯ ಮಹಮದ್ ಅಬ್ದುಲ್ ಯಾನಿಸಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ, ರಾಯಚೂರಿನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವೆಂಕಣ್ಣ, ಉಪನ್ಯಾಸಕ ರವಿ ಮೇಸ್ತಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-32-762492874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.