ರಾಯಚೂರು: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉನ್ನತ ಗುರಿಯನ್ನು ಇಟ್ಟುಕೊಳ್ಳಬೇಕು. ಆ ಮೂಲಕ ನಿರಂತರ ಪರಿಶ್ರಮ ಹಾಗೂ ಪ್ರಯತ್ನದ ಮೂಲಕ ಗುರಿ ಸಾಧಿಸಲು ಪ್ರಯತ್ನಿಸಬೇಕು’ ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.

ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳುಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯ, ಸಂಸ್ಕಾರಗಳನ್ನು ರೂಢಿಸಿಕೊಳ್ಳಬೇಕು. ಚೆನ್ನಾಗಿ ಓದಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಯಶ ಸಾಧಿಸಿ ನಾಗರಿಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ವಿದ್ಯಾರ್ಥಿಗಳು ಓದಿನ ಮಧ್ಯೆ ಶಾಲೆಯನ್ನು ಬಿಡದಂತೆ ಶಿಕ್ಷಕರು ನೋಡಿಕೊಳ್ಳಬೇಕು. ಶಾಲೆ ಬಿಟ್ಟಲ್ಲಿ ಮರಳಿ ಶಾಲೆಗೆ ಕರೆ ತರುವ ಕೆಲಸ ಮಾಡಬೇಕು‘ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕುಮಾರ ಕಾಂದೂ ಮಾತನಾಡಿ, ‘ಶಾಲೆ ಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ನೋಡಿ ನನಗೆ ಸಂತೋಷವಾಗಿದೆ. ಮಕ್ಕಳನ್ನು ನೋಡಿ, ನಮ್ಮ ಬಾಲ್ಯದ ನೆನಪು ಆಗುತ್ತದೆ. ಮಕ್ಕಳು ಒಂದು ಗುರಿಯನ್ನು ಇಟ್ಟಕೊಳ್ಳಬೇಕು. ಆ ಗುರಿಯನ್ನು ಸಾಧಿಸಲು ಸತತ ಪ್ರಯತ್ನ ಮಾಡಬೇಕು’ ಎಂದರು.

‘ಶಾಲೆಯಲ್ಲಿ ಕಿಶೋರಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಅಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡಿ, ಮಾಹಿತಿ ಪಡೆಯಬೇಕು. ಅಲ್ಲದೆ ನಿಮ್ಮ ಸಹಪಾಠಿಗಳೊಂದಿಗೆ ಈ ಮಾಹಿತಿಯನ್ನು ಹಂಚಿಕೊಳ್ಳಬೇಕು’ ಎಂದು ತಿಳಿಸಿದರು.

ಸಾಂಕೇತಿಕವಾಗಿ ಶಾಲಾ ಮಕ್ಕಳಿಗೆ ಬಟ್ಟೆ ಹಾಗೂ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.

ಕವಿತಾಳ: ಪಟ್ಟಣ ಸೇರಿದಂತೆ ಸುತ್ತಲಿನ ಹಳ್ಳಿಗಳ ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಹೂಗುಚ್ಛ ನೀಡಿ ಸ್ವಾಗತಿಸುವ ಮೂಲಕ ಸೋಮವಾರ ಶಾಲಾ ಪ್ರಾರಂಭೋತ್ಸವಕ್ಕೆ ಸಂಭ್ರಮದ ಚಾಲನೆ ನೀಡಲಾಯಿತು.

ಸಮೀಪದ ವಟಗಲ್ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಅಲಂಕೃತ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ಕರೆ ತಂದು ಮಕ್ಕಳಿಗೆ ಹೂಗುಚ್ಛ ನೀಡಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ಸೇರಿದಂತೆ ಸಿಹಿ ವಿತರಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಅಮರೇಶ ಸಾನಬಾಳ, ಮುಖ್ಯ ಶಿಕ್ಷಕ ಬಸವರಾಜ ಪಲಕನಮರಡಿ, ಶಿಕ್ಷಕರಾದ ಮಮತಾ, ಸರೋಜಿನಿ, ಹನುಮೇಶ ಮಡಿವಾಳ, ಜ್ಯೋತಿ ಮತ್ತು ದೀಪಾ ಮತ್ತಿತರರು ಉಪಸ್ಥಿತರಿದ್ದರು.

ಕವಿತಾಳದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳನ್ನುಶಿಕ್ಷಕರು ಹೂಗುಚ್ಛ ನೀಡಿ ಸ್ವಾಗತಿಸಿದರು. ಕೊಠಡಿ ಗಳನ್ನು ತೋರಣಗಳಿಂದ ಅಲಂಕರಿಸಲಾಗಿತ್ತು.

ಡಯಟ್ ಉಪನ್ಯಾಸಕ ಜೀವನಸಾಬ್ ಮಾತನಾಡಿ, ‘ಕಲಿಕೆಯ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಭಿನ್ನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮಕ್ಕಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು’ ಎಂದರು.

ಮುಖ್ಯ ಶಿಕ್ಷಕಿ ಮಂಜುಳಾ ಅಂಗಡಿ, ಶಿಕ್ಷಕರಾದ ಸಿದ್ರಾಮೇಶ, ಶಂಕ್ರಯ್ಯಸ್ವಾಮಿ, ಪ್ರಾಣೇಶ, ಗಿರೀಶ ಅಂಗಡಿ, ರಂಗಣ್ಣ, ಶಾರದಾ, ಪುಷ್ಪಾ, ರೇಣುಕಾ, ನೇತ್ರಾ, ಬಸಮ್ಮ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-32-1724161984

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.